ರಾಯಚೂರು | ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Date:

ಹುಬ್ಬಳ್ಳಿಯಲ್ಲಿ ಪ್ರೇಮದ ಹೆಸರಿನಲ್ಲಿ ಯುವತಿ ಅಂಜಲಿ ಆಂಬೀಗೇರ ಅವರನ್ನು ಕೊಲೆ ಮಾಡಿರುವ ಅರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾ ಗಂಗಾಮಸ್ಥ ಸಮಾಜ ಅಧ್ಯಕ್ಷ ಕೆ ಶಾಂತಪ್ಪ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. “ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ಕೊಲೆ ಮಾಡುವ ಹಂತಕ್ಕೆ ಯುವಕರು ಮುಂದಾಗುತ್ತಿರುವುದು ಕಳವಳಕಾರಿ. ಕಠಿಣ ಶಿಕ್ಷೆ ಇಲ್ಲದೇ ಇರುವುದರಿಂದ ಭಯವೇ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಯುವತಿಯರ ಕೊಲೆ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿರುವುದು ಅಂತಕಕಾರಿಯಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳನ್ನು ನಿಯಂತ್ರಿಸಲು ಸಾಧ್ಯ” ಎಂದರು.

“ಬಡ ಕುಟುಂಬದಲ್ಲಿ ಜನಿಸಿದ್ದ ಅಂಜಲಿ ಅಂಬಿಗೇರ ಅವರನ್ನು ಗಿರೀಶ್ ಸಾವಂತ್ ಎಂಬ ಯುವಕ ಕೊಲೆ ಮಾಡಿದ್ದಾನೆ. ಮೃತಳ ಕುಟುಂಬಕ್ಕೆ ಸರ್ಕಾರ ಸರ್ಕಾರಿ ಉದ್ಯೋಗ ನೀಡಬೇಕು. ಜೊತೆಗೆ, ಆರ್ಥಿಕ ನೆರವು ನೀಡಬೇಕು. ತೆಲಂಗಾಣ ಮಾದರಿಯಲ್ಲಿ ಆರೋಪಿಗಳನ್ನು ಗುಂಡಿಕ್ಕುವ ಕಾನೂನು ರೂಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಠಿಯಲ್ಲಿ ಕಡಗೋಳ ಆಂಜಿನೇಯ್ಯ, ತಿಮ್ಮಪ್ಪ, ಪ್ರಕಾಶ ವಕೀಲ, ಕುರ್ಡಿ ನರಸಪ್ಪ, ರಾಮಚಂದ್ರ ಕಡಗೋಳ ಇನ್ನಿತರರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...