ರಾಯಚೂರು | ತಾಲೂಕು ಘೋಷಣೆಗೆ ಆಗ್ರಹಿಸಿ; ಮುದಗಲ್ ಬಂದ್ ಗೆ ಕರೆ

Date:

ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣವು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ನಾಳೆ ಮುದಗಲ್ ಬಂದ್ ಗೆ ಕರೆ ನೀಡಲಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ಹೇಳಿದರು.

ಮುದಗಲ್ ನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳೆದ 2023 ರ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ರಾಜ್ಯ ಮಟ್ಟದ ನಾಯಕರುಗಳು ಅಧಿಕಾರಕ್ಕಾಗಿ ಮುದಗಲ್ ತಾಲೂಕು ಕೇಂದ್ರದ ಘೋಷಣೆ, ಕೋಟೆ ಉತ್ಸವ, ಸಮರ್ಪಕ ಕುಡಿಯುವ ನೀರಿನ ಯೋಜನೆ ಅನುಷ್ಠಾನಗಳ ಬಗ್ಗೆ ಸುಳ್ಳು ಭರವಸೆಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದರೂ ಕೂಡ ಪಟ್ಟಣದ ಜನತೆಯ ಕನಸಿನ ಕೂಸಿನ ಯೋಜನೆಗಳ ಜೊತೆ ಚೆಲ್ಲಾಟ ವಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮುದಗಲ್ ಬಂದ್ ಗೆ ಪ್ರಗತಿಪರ, ಕನ್ನಡಪರ, ರೈತಪರ, ದಲಿತಪರ ಸೇರಿದಂತೆ 19 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿದ್ದು ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲಿಸಿದ್ದು ಶಾಂತಿಯುತವಾಗಿ ಬಂದ್ ಗೆ ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷಾತೀತವಾಗಿ 18 ರಂಧು ನಡೆಯುವ ಈ ಹೋರಾಟಕ್ಕೆ ಹಾಲಿ ಶಾಸಕ ಮಾನಪ್ಪ ವಜ್ಜಲ್, ಮಾಜಿ ಶಾಸಕ ಡಿ.ಎಸ್. ಹುಲಗೇರಿ ಸೇರಿದಂತೆ ಪಟ್ಟಣದ ಹಿರಿಯರನ್ನು ಕೂಡ ಬೆಂಬಲಿಸುವಂತೆ ಅಹ್ವಾನಿಸಲಾಗಿದ್ದು ಕೆಲ ಮಠಾಧೀಶರು ಆಗಮಿಸಿಲಿದ್ದಾರೆ. ಕರವೇ ಘಟಕಾಧ್ಯಕ್ಷ ಎಸ್.ಎ.ನಯೀಮ್ ಮಾತನಾಡಿ, ನಮ್ಮ ಹಕ್ಕು ಪಡೆಯಲು ಪಟ್ಟಣದ ಜನತೆಯ ಹಾಗೂ ಸಂಘಟನೆಗಳ ಒಡಗೂಡಿ ಸತತವಾಗಿ ಶಾಂತಿಯುತವಾಗಿ ಪ್ರತಿಭಟಿಸಲಾಗಿದ್ದು ನಮ್ಮ ಬೇಡಿಕೆಗಳು ಸಕಾರಾತ್ಮಕವಾಗಿ ಈಡೇರದೇ ಹೋದಲ್ಲಿ ಮುಂದೆ ಕಾಂತ್ರಿಕಾರಿ ಹೋರಾಟಕ್ಕೆ ಅಣಿಯಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಕಳ್ಳತನ ಪ್ರಕರಣ; ಇಬ್ಬರ ಬಂಧನ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಜಪ್ತಿ

ಮುಖಂಡರಾದ ಮಂಜೂರ್ ಮಿಯಾ ಮುಜಾವರ್, ರಘುವೀರ ಮೇಗಳಮನಿ, ರಹೀಂ ಶಾ ಮಕಾಂದಾರ, ಮಂಜುನಾಥ ಬನ್ನಿಗೋಳಕರ, ಬಸವರಾಜ ಬಂಕದಮನಿ, ಸಂಜಯ್ ಚೆಲುವಾದಿ, ಹನುಮಂತ ಬಡಿಗೇರ್, ರಮೇಶ ಕಂದಗಲ್, ಸಾಬು ಹುಸೇನ್, ಮಹಾಂತೇಶ ಚಟ್ಟೇರ್, ಹಾಗೂ ಇತರರಿದ್ದರು.

b59f1ef46f1981a0bca30ef559f6d501
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...