ರಾಯಚೂರು | ಹೆಲ್ಮೆಟ್ ಕಡ್ಡಾಯ ಆದೇಶ ಹಿಂಪಡೆದು, ರಸ್ತೆ ಸುಧಾರಣೆಗೆ ಅಧಿಕಾರಿಗಳು ಸಮಯ ಕೊಡಲು ಆಗ್ರಹ

Date:

ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ದಂಡ ಹಾಕುವುದನ್ನು ಎರಡು ತಿಂಗಳು ಸ್ಥಗಿತಗೊಳಿಸಿ ರಸ್ತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ರಾಜೇಶ ಕುಮಾರ ಮನವಿ ಮಾಡಿದರು.

ರಾಜ್ಯ ಸರ್ಕಾರ ಈ ಹಿಂದೆ ಹೆಲ್ಮೆಟ್ ಕಡ್ಡಾಯ ಆದೇಶ ಮಾಡಿದರೂ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ಮಾಡಿಲ್ಲ. ಆದರೆ ನವೆಂಬರ್ 1ರಿಂದ ರಾಯಚೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಏಕಾಏಕಿ ದಂಡ ವಸೂಲಿ ಮಾಡುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಗುಣಮಟ್ಟದ ರಸ್ತೆಯಿಲ್ಲ, ಸಿಗ್ನಲ್, ಸಿಸಿ ಕ್ಯಾಮೆರಾ, ಸ್ಪೀಡ್ ಬ್ರೇಕರ್ಸ್  ಅಳವಡಿಸಿಲ್ಲ. ಇದನ್ನು ಮೊದಲು ಅಳವಡಿಸಿ ರಸ್ತೆ ಸುರಕ್ಷತೆ ಕೈಗೊಳ್ಳಬೇಕು. ಬಳಿಕ ಹೆಲ್ಮೆಟ್ ಧರಿಸದವರಿಗೆ ದಂಡ ಹಾಕಲಿ ಎಂದು ಸೋಮವಾರ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಒತ್ತಾಯಿಸಿದರು.

ಹೆಲ್ಮೆಟ್ ಧರಿಸದ ದ್ರಿಚಕ್ರ ವಾಹನ ಸವಾರರಿಗೆ ₹500 ರಿಂದ ₹1000 ದಂಡ ಹಾಕುವುದರಿಂದ ರಸ್ತೆ ಬದಿಯಲ್ಲಿ ಅನೇಕ ವ್ಯಾಪಾರಸ್ಥರು ಕಂಡಕಂಡಲ್ಲಿ ಕಳಪೆ ಹೆಲ್ಮೆಟ್ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸವಾರರ ಸುರಕ್ಷತೆಗೆ ಖಾತ್ರಿ ಇಲ್ಲದಂತಾಗಿದೆ. ಪೊಲೀಸ್ ಇಲಾಖೆಯಿಂದ ಇದನ್ನು ಪರಿಶೀಲಿಸಿ ಕಳಪೆ ಹೆಲ್ಮೆಟ್ ವಶಕ್ಕೆ ಪಡೆದು ಕ್ರಮ ಕೈಗೊಳ್ಳಬೇಕು. ವಾಹನಗಳ ಬಿಡಿ ಭಾಗ ಮಾರಾಟ ಮಾಡುವವರಿಗೆ ಗುಣಮಟ್ಟದ ಹೆಲ್ಮೆಟ್ ಮಾರಾಟ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

2 ದಿನಗಳ‌ ಒಳಗೆ ರಸ್ತೆ ಸುರಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲನೆ ಮಾಡಿ ಅಪಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ವಿದ್ಯಾರ್ಥಿಗಳ ಜೊತೆಗೂಡಿ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ರಾಜು, ಅಗಸ್ಟೀನ್, ಆಂಜನೇಯ ಮತ್ತಿತರರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...