ರಾಯಚೂರು | ಡಿಪೋ ಮ್ಯಾನೇಜರ್‌ ಅವಾಚ್ಯ ನಿಂದನೆ ಆರೋಪ; ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Date:

ಬಸ್ ಸಮಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಜೊತೆ ಡಿಪೋ ಕಂಟ್ರೋಲ್ ಮ್ಯಾನೇಜರ್‌ ಅವಾಚ್ಯ ಪದ ಬಳಸಿ ನಿಂದನೆ ಮಾಡಿದರೆಂಬ ಆರೋಪಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಹೊಸ ಬಸ್‌ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ಸ್ಥಳೀಯ ಶಾಲಾ–ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಕ್ಕೆ ಜಮಾಯಿಸಿದ್ದು, ವಿವಿಧ ಸಂಘಟನೆಗಳ ನಾಯಕರು ಸಹ ಬೆಂಬಲ ಸೂಚಿಸಿದರು. ಬಸ್ ಸಮಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದ ಬಳಕೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದರಿಂದ ಮನನೊಂದು ತರಗತಿಗಳ ಬಳಿಕ ವಿದ್ಯಾರ್ಥಿಗಳು ಗುಂಪುಗಟ್ಟಿಯಾಗಿ ಹೊಸ ಬಸ್ ನಿಲ್ದಾಣದಲ್ಲಿ ಆಗ್ರಹಿಸಿದರು.

ಪ್ರತಿಭಟನೆ ಉದ್ದೇಶಿಸಿ ರಮೇಶ ವಿರಾಪುರ ಮಾತನಾಡಿ, ಪಟ್ಟಣದ ಸುತ್ತಮುತ್ತ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮಾತ್ರ ಬಸ್ ಸೌಲಭ್ಯ ಲಭ್ಯವಿದ್ದು, ಸಂಜೆ ಊರಿಗೆ ಹಿಂತಿರುಗಲು ಗಂಟೆಗಳ ಕಾಲ ಕಾಯಬೇಕಾದ ದುಸ್ಥಿತಿ ಮುಂದುವರೆದಿದೆ. ಇದರಿಂದ ಬೇಸತ್ತು ಮಕ್ಕಳು ಅಧಿಕಾರಿಗೆ ಕೇಳಲು ಮುಂದಾದಾಗ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, “ಡಿಪೋ ಮ್ಯಾನೇಜರ್‌ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು, ವಜಾ ಮಾಡಬೇಕು. ಇಲ್ಲದಿದ್ದರೆ ಧರಣಿ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ತಾಲ್ಲೂಕು ಡಿಪೋ ಮ್ಯಾನೇಜರ್ ಸ್ಥಳಕ್ಕೆ ಬಂದು ಹಳ್ಳಿ ಪ್ರದೇಶಗಳಿಗೆ ತಕ್ಷಣ ಬಸ್ ವ್ಯವಸ್ಥೆ ಮಾಡಿಸುವುದಾಗಿ ಹಾಗೂ ಮುಂದೆಯೂ ಪ್ರತಿದಿನ ವಿದ್ಯಾರ್ಥಿಗಳಿಗಾಗಿ ಬಸ್ ಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶವ ಸಂಸ್ಕಾರ ವಾಹನ ಹಾಗೂ ರೆಫ್ರಿಜರೇಟರ್‌ ಗಳ ಹಸ್ತಾಂತರ

ಪ್ರತಿಭಟನೆಯಲ್ಲಿ ವಿನೋದ್ ಕುಮಾರ್, ಸುರೇಶ್ ಗುರಿಕಾರ, ನಿಂಗಪ್ಪ, ಲಾಲ್ ಪೀರ, ವೆಂಕಟೇಶ್ ಗಿರಿ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...