ರಾಯಚೂರು | ಅವಹೇಳನಕಾರಿ ಪೋಸ್ಟ್‌; ಎರಡು ಗುಂಪುಗಳ ನಡುವೆ ಗಲಾಟೆ

Date:

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂಬ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

ಸಿಂಧನೂರಿನ ಆರ್.ಹೆಚ್ ಕಾಲೋನಿಯಲ್ಲಿ ಭಾನುವಾರಿ ರಾತ್ರಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ನಾಲ್ವರು ಯುವಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕೋಮಿನ ಬಗ್ಗೆ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದಾರೆಂದು ಆರೋಪಿ, ಸಿಂಧನೂರಿನ ಕೆಲವು ಯುವಕರು ಬಂಗಾಳಿ ಕ್ಯಾಂಪ್‌ಗೆ ಹೋಗಿ ಗಲಾಟೆ ಮಾಡಿದ್ದಾರೆ. ಅಲ್ಲಿನ ಸ್ಥಳೀಯರು ಮತ್ತು ಯುವಕರು ಕೈ-ಕೈ ಮಿಲಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪವಿತ್ರೋ ಬಿಸ್ವಾಸ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ತಿತಿ ನಿಯಂತ್ರಿಸಿದ್ದಾರೆ. ಜಿಲ್ಆ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ ಅವರು ತಡರಾತ್ರಿವರೆಗೂ ಸ್ಥಳದಲ್ಲಿದ್ದು, ಮಾಹಿತಿ ಪಡೆದಿದ್ದಾರೆ. ಬಿಸ್ವಾಸ್ ಅವರ ದೂರಿನ ಆಧಾರದ ಮೇಲೆ ಅಕ್ಬರ್, ಶಾಮೀದ್, ತಾಜುದ್ದೀನ್, ಸಮೀರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಿಂದ ಕ್ಯಾಂಪ್‌ನಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೋಮವಾರ ಬೆಳಿಗ್ಗೆ ಬಂಗಾಲಿ ಕ್ಯಾಂಪಿನ ನೂರಾರು ಯುವಕರು ನಗರದ ಮಿನಿ ವಿಧಾನಸೌಧದ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...