ರಾಯಚೂರು | ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನ; ಪಕ್ಷದಿಂದ ಸಿ ಟಿ ರವಿ ಉಚ್ಚಾಟನೆಗೆ ಶ್ರೀದೇವಿ ನಾಯಕ ಆಗ್ರಹ

Date:

ಅಂಬೇಡ್ಕರ್ ಅಪಮಾನ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿ ಟಿ ರವಿ ಅವಾಚ್ಯ ಶಬ್ದದಿಂದ ನಿಂದಿಸಿರುವುದರಿಂದ ಕೂಡಲೇ ಆತನನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ನಾಯಕಿ ಶ್ರೀದೇವಿ ನಾಯಕ ಆಗ್ರಹಿಸಿದರು.

“ಗೃಹಮಂತ್ರಿ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದಾರೆಂದು ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಿಟಿ ರವಿ ತಾಳ್ಮೆ ಕಳೆದುಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿಗರ ಬೇಟಿ ಪಡಾವ್, ಬೇಟಿ ಬಚಾವ್ ಎಂದು ಚುನಾವಣೆ ಗಿಮಿಕ್‌ ಮಾಡುತ್ತಿದ್ದಾರೆಯೇ ಹೊರತು ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ. ಈಗ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವುದು ಅವರ ಕೀಳು ಮಟ್ಟದ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಬಿಎಸ್‌ಪಿ ಆಗ್ರಹ

“ಬಿಜೆಪಿಯವರ ಮಹಿಳೆ ಹಾಗೂ ದಲಿತರ ಪರವಾದ ಸರ್ಕಾರ ನಮ್ಮದು‌ ಎಂಬ ಬಿಜೆಪಿಗರ ಭಾಷಣ ಕೇವಲ ವೇದಿಕೆಗಳಿಗೆ ಸೀಮಿತವಾಗಿದೆ. ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವ ಇರುವುದೇ ಆದರೆ ಸಿ ಟಿ ರವಿ ಅವರನ್ನು ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...