ರಾಯಚೂರು | ಸರ್ಕಾರಿ ಅನುದಾನ ದುರ್ಬಳಕೆ ಆರೋಪ: ದೇವದುರ್ಗ ಬಿಇಓ ಅಮಾನತು

Date:

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ ಬಿಡುಗಡೆ ಮಾಡಲಾಗಿದೆ.

ರಾಯಚೂರು ಡಯಟ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಮಲ್ಲಿಕಾರ್ಜುನ ಪ್ರಭಾರ ವಹಿಸಿಕೊಳ್ಳುವಂತೆ ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಎಕರೆ ಜಮೀನು ಖರೀದಿಗೆ ಹಟ್ಟಿ ಚಿನ್ನದ ಗಣಿ ಕಂಪನಿ ಪ್ರಧಾನ ನಿರ್ದೇಶಕರು ₹30 ಲಕ್ಷ ದೇಣಿಗೆ ನೀಡಿದ್ದು, ಈ ಹಣವನ್ನು ಮೇಲಧಿಕಾರಿಗಳ ಅನುಮತಿ, ಜಿಲ್ಲಾಧಿಕಾರಿಗಳ ಸಮಿತಿಯ ಗಮನಕ್ಕಿಲ್ಲದೇ ನೇರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಆರೋಪದಿಂದ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದ ಕಾಂಗ್ರೆಸ್ ಮುಖಂಡ ಟಿ.ಸುರೇಶನಾಯಕ ಅವರು ಸೆ.29 ರಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ₹30 ಲಕ್ಷ ದುರುಪಯೋಗಪಡಿಸಿಕೊಂಡ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡು ವರದಿ ನೀಡುವಂತೆ ಇಲಾಖೆಯ ಕಲಬುರಗಿ ವಿಭಾಗೀಯ ಆಯುಕ್ತರಿಗೆ ವಹಿಸಲಾಗಿತ್ತು.

ರಾಯಚೂರು ಜಿಲ್ಲೆಗೆ ಭೇಟಿ ನೀಡಿ ತನಿಖೆ ನಡೆಸಿ ನೀಡಿದ ಪ್ರಾಥಮಿಕ ವಿಚಾರಣೆ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೂಚನೆ ಹೊರಡಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರಿಗೆ ವರ್ಗಾವಣೆ ಮಾಡಿ ನಂತರ ಎಸ್‌ಡಿಎಂಸಿ ರಚನೆಯಾಗದೇ ಹಿಂದಿನ ಅಧ್ಯಕ್ಷರ ಸಹಿ ಪಡೆದು ಭೂಮಿ ನೀಡಿದ ಮಾಲೀಕನಿಗೆ ಚೆಕ್ ನೀಡಿದ ಬಿಇಒ ಸುಖದೇವ ಎಚ್, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೇ ಹಾಗೂ ಸರ್ಕಾರದ ಸುತ್ತೋಲೆ ಹಾಗೂ ನಿಯಮಗಳನ್ನು ಉಲ್ಲಂಘಿಸಿ, ಜಿಲ್ಲಾಧಿಕಾರಿಗಳ ಸಮಿತಿಯಿಂದ ದರ ನಿಗದಿಪಡಿಸದೇ ಕರ್ತವ್ಯಲೋಪ ಎಸಗಿರುವುದು ಕಂಡು ಬಂದಿದೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

2023-24 ನೇ ಸಾಲಿನಲ್ಲಿ ವರ್ಗಾವಣೆಗೊಂಡ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಬಿಡುಗಡೆಗೆ ಪ್ರತಿಯೊಬ್ಬರಿಂದ ರೂ20 ಸಾವಿರದಿಂದ ₹30 ಸಾವಿರ ಪಡೆದು, ಶಿಕ್ಷಕರ ಸೇವಾ ಪುಸ್ತಕ ಹಾಗೂ ಅಂತಿಮ ವೇತನ ಕಳುಹಿಸದೇ ಕರ್ತವ್ಯಲೋಪ ಎಸಗಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಿ ಅಮಾನತು ಆದೇಶವನ್ನು ಕಾಯ್ದಿರಿಸಿದ ಇಲಾಖೆ, ಸಾಕ್ಷಿ ನಾಶ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...