ರಾಯಚೂರು | ಶಿಕ್ಷಣದಿಂದ ಭಗೀರಥ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಶಿವರಾಜ ಪಾಟೀಲ್

Date:

ಭಗೀರಥ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು.

ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಭಗೀರಥ ಸಮಾಜದ ಹೆಚ್ಚಿನ ಅಭಿವೃದ್ಧಿಗೆ ಸಮಾಜದಲ್ಲಿನ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯಬೇಕು ಹಾಗೂ ಐಎಎಸ್, ಐಪಿಎಸ್ ಸೇರಿದಂತೆ ರಾಜಕೀಯವಾಗಿ ಬೆಳೆಯಲು ಪ್ರಾತಿನಿಧ್ಯ ದೊರೆತಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜವು ಹೆಚ್ಚಾಗಿ ಗುರುತಿಸಿಕೊಳ್ಳುವುದು ರಾಜಕೀಯ ಪ್ರಾತಿನಿಧ್ಯ ದೊರೆತಾಗ ಮಾತ್ರ. ಶೈಕ್ಷಣಿಕವಾಗಿ ಅಭಿವೃದ್ಧಿಯ ಜೊತೆಗೆ ರಾಜಕೀಯವಾಗಿ ಬೆಳೆಯಬೇಕು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಸಾಧನೆಗೈದಿದ್ದಾರೆ. ಅವರ ಉನ್ನತ ವ್ಯಾಸಂಗಕ್ಕೆ ಪೋಷಕರು ಅನೂಕೂಲ ಒದಗಿಸಿಕೊಡಬೇಕು” ಎಂದರು.

“ಸಮಾಜದ ಸಮುದಾಯ ಭವನಕ್ಕೆ ಈ ಹಿಂದೆ ಅನುದಾನ ನೀಡಿದ್ದು, ಇದೀಗ ಸಮಾಜದ ಅಭಿವೃದ್ಧಿಗೆ ಶಾಸಕರ ಅನುದಾನದಲ್ಲಿ 15 ಲಕ್ಷ ರೂ. ನೀಡಲಾಗುವುದು. ಸಮಾಜದ ಸಹಕಾರದೊಂದಿಗೆ ಸದಾ ಬೆನ್ನೆಲುಬಾಗಿ ಇರುತ್ತೇವೆ” ಎಂದು ತಿಳಿಸಿದರು.

ಈ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು 5 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ₹5,000 ನಗದು ಬಹುಮಾನ ನೀಡಿದರು. ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಾಲ್ಮೀಕಿ ಜಯಂತಿ ವೇಳೆ ಅವಮಾನ; ನಾಯಕ ಸಮಾಜದ ಮುಖಂಡರ ಆರೋಪ

ಈ ಸಂದರ್ಭದಲ್ಲಿ ಮಲದಕಲ್ ನಿಜಾನಂದ ಯೋಗಾಶ್ರಮದ ಶ್ರೀ ಗುರುಬಸವ ರಾಜಗುರುಗಳು, ಸಮಾಜದ ರಾಜ್ಯ ಕಾರ್ಯದರ್ಶಿ ಯು.ವೆಂಕೋಬಾ, ಗೌರವಾಧ್ಯಕ್ಷ ದೇವಣ್ಣ ನವಲಕಲ್, ಅಧ್ಯಕ್ಷ ಬುಗ್ಗಾರೆಡ್ಡಿ ದೇವನಪಲ್ಲಿ, ಪದ್ಮಾವತಿ ಬಿ.ವಿ.ನಾಯಕ, ಶ್ರೀಕಾಂತ್ ರಾವ್ ವಕೀಲ, ಜಕ್ಕಪ್ಪ ಯಡವೆ, ಬನ್ನಪ್ಪ ಹುಲಿಬೆಟ್ಟ, ರಮೇಶ ಮೇಟಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...