ರಾಯಚೂರು | ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ: ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Date:

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಕೊಲೆಯಾದ ಘಟನೆಗಳು, ಅತ್ಯಾಚಾರ ಪ್ರಕರಣಗಳು ಹಾಗೂ ಅಸಹಜ ಸಾವುಗಳು ಅಮಾನವೀಯ ಕೃತ್ಯಗಳ ಹಿಂದೆ ಇದ್ದವರ ವಿರುದ್ಧ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸಿಂಧನೂರು ಘಟಕ ವತಿಯಿಂದ ಪ್ರತಿಭಟಿಸಿದರು.

ನಗರದ ಪ್ರವಾಸಿ ಮಂದಿರದಿಂದ , ಕೋರ್ಟ್ ವೃತ್ತ ಮೂಲಕ ತಹಶೀಲ್ದಾರ ಕಚೇರಿಗೆ ತೆರಳಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕ್ರಮ ಜರುಗಿಸಬೇಕು ಎಂದು ತಹಶೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಪಿ.ರುದ್ರಪ್ಪ ಮಾತನಾಡಿ ನೂರಾರು ಪ್ರಕರಣಗಳು ನಡೆದರು,ಹಲವು ದಿನಗಳಿಂದ ಹೋರಾಟ ನಡೆದರು ಸರಕಾರಗಳು ಧ್ವನಿ ಎತ್ತದೇ ಇರುವುದು ಬಹಳ ಆಘಾತಕಾರಿ. ಜನಪ್ರತಿನಿಧಿಗಳು ತಕ್ಷಣ ಪ್ರತಿಕ್ರಿಯಿಸಬೇಕಾಗಿತ್ತು. ನ್ಯಾಯ ದೊರೆಯಬೇಕಾದ ಸಂತ್ರಸ್ತರು ಮತ್ತಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ. ನ್ಯಾಯಾಂಗ ಮೇಲ್ವಿಚಾರಣೆಯಲ್ಲಿ ಎಸ್ ಐಟಿ ತನಿಖೆ ನಡೆಯಬೇಕೆಂದು ಎಂದು ಹೇಳಿದರು.

1000160828

ಧರ್ಮಸ್ಥಳದಲ್ಲಿ ಅಕ್ರಮ ಕೂಟ ಕೊಲೆ ಮಾಡಿದವರನ್ನು ತಾನೇ ಕಾಡಿನಲ್ಲಿ ಹೂತುಹಾಕಿರುವುದಾಗಿ ಕೋರ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸಾಕ್ಷಿ ನುಡಿದಿದ್ದು , ಆದರೆ ಧರ್ಮದ ಹೆಸರಿನಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ದಾರಿ ತಪ್ಪಿಸುತ್ತಿದ್ದಾರೆ. ಈ ಹಿಂದೆಯೂ ಪದ್ಮಲತಾ, ವೇದಲತಾ ಕೊಲೆ ಪ್ರಕರಣಗಳು ತನಿಖೆ ನಡೆದರೂ ಮುಚ್ಚಿ ಹಾಕಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೋರ್ವ ಮಾತನಾಡಿದ ಹೋರಾಟಗಾರ ಬಾಸ್ಮಿಯಾ, ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದಕ್ಕಾಗಿ ಯೂಟ್ಯೂಬರ್ ಸಮೀರ್ ಅವರಿಗೆ ಪ್ರಕರಣ ದಾಖಲಿಸುತ್ತಾರೆ. ಧರ್ಮಸ್ಥಳ ಬಗ್ಗೆ ಮಾತನಾಡುವವರಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಅವರ ಧ್ವನಿಯನ್ನು ದಮನ ಮಾಡುತ್ತಿದ್ದಾರೆ ಎಂದರು.

ನೈತಿಕ ಹೊಣೆ ಹೊತ್ತು ರಾಜ್ಯಸಭೆ ಸ್ಥಾನ ಹಾಗೂ ಧರ್ಮಧಿಕಾರಿ ಸ್ಥಾನಕ್ಕೆ ವೀರೇಂದ್ರ ಹೆಗಡೆ ರಾಜೀನಾಮೆ ನೀಡಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗೊಬ್ಬರ ಕಾಳಸಂತೆ ; 79 ಟನ್ ಯೂರಿಯಾ ಮಾರಾಟ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷ ಶಕುಂತಲಾ, ಅಂಗನವಾಡಿ ಅಧ್ಯಕ್ಷೆ ಸುಲೋಚನಾ, ಕರ್ನಾಟಕ ಜನಶಕ್ತಿ ಜಿಲ್ಲಾ ಮುಖಂಡ ಬಸವರಾಜ್ ಬಾದರ್ಲಿ , ಡಿಎಚ್ ಕಾಂಬ್ಳೆ, ಜಮಾತ್ ಇಸ್ಲಾಂ ಹಿಂದ್ ಮುಖಂಡ ಹುಸೇನಸಾಬ, ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಸಿಂಧನೂರು ತಾಲ್ಲೂಕಾಧ್ಯಕ್ಷ ಅಬುಲೈಸ್ ನಾಯ್ಕ ,ಚಂದ್ರಶೇಖರ ಗೋರೆಬಾಳ, ಚಿಟ್ಟಿಬಾಬು, ಶರಬಣ್ಣ ನಾಗಲಾಪುರ, ಮಂಜುನಾಥ ಗಾಂಧಿನಗರ,ವಾಸಿಂ, ಗಂಗಮ್ಮ ಕಲವಲದೊಡ್ಡಿ ,ಚನ್ನಮ್ಮ ಬಾದರ್ಲಿ .ಎಸ್ ದೇವೇಂದ್ರಗೌಡ ಇನ್ನಿತರರು ಉಪಸ್ಥಿತರಿದ್ದರು.






WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...