ರಾಯಚೂರು | ವಿಶೇಷಚೇತನರೂ ನಾಯಕತ್ವ ಬೆಳಸಿಕೊಳ್ಳಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ

Date:

ವಿಶೇಷಚೇತನರೂ ಕೂಡಾ ನಾಯಕತ್ವ ಬೆಳಸಿಕೊಳ್ಳಬೇಕು ಎಂಬುದು ಈ ವರ್ಷದ ಘೋಷ್ಯವಾಕ್ಯ. ಸುಸ್ಥಿರ ಭವಿಷ್ಯಕ್ಕಾಗಿ ವಿಶೇಷಚೇತನರ ನಾಯಕತ್ವಕ್ಕೆ ಉತ್ತೇಜನ ನೀಡುವುದರ ಜತೆಗೆ ಸರ್ಕಾರಿ ಮತ್ತು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ‌ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಶೇಷಚೇತನರಿಗಾಗಿ ಶ್ರಮಿಸುತ್ತಿರುವ ಸಂಘ ಹಾಗೂ ವಿವಿಧ ಒಕ್ಕೂಟಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿಶೇಷಚೇತನರು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಮಾಜಿಕ, ಆರ್ಥಿಕವಾಗಿ ಸದೃಢರಾದಾಗ ಮಾತ್ರ ಮುನ್ನೆಲೆಗೆ ಬರಲು ಸಾಧ್ಯ, ವಿಶೇಷಚೇತನರಲ್ಲಿ ನಾಯಕತ್ವ ಬೆಳೆದಾಗ ಸಮಾಜದಲ್ಲಿ ಗೌರವ ದೊರೆಯುತ್ತದೆ. ವಿದ್ಯಾವಂತ ವಿಶೇಷಚೇತನರಿಗೆ ಸರ್ಕಾರಿ ಉದ್ಯೋಗದಲ್ಲಿ ಅವಕಾಶಗಳಿವೆ. ಜತೆಗೆ ಸ್ವಯಂ ಉದ್ಯೋಗ ಮಾಡಲು ನಗರದಲ್ಲಿ ತರಬೇತಿ ನೀಡಿ ಸಹಕಾರ ನೀಡಲಾಗುತ್ತಿದೆ. ಈಗಾಗಲೇ 100 ಮಂದಿ ಮಹಿಳೆಯರು ಇದರಲ್ಲಿ ತರಬೇತಿ ಪಡೆಯುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರ ಮತ್ತು ಗ್ರಾಮೀಣ ಭಾಗದ ವಿಶೇಷಚೇತನರು ನಾಯಕತ್ವ ಬೆಳಸಿಕೊಳ್ಳಬೇಕು. ಸ್ವಯಂ ಉದ್ಯೋಗದ ತರಬೇತಿ ಪಡೆದುಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಬೇಕು, ಸ್ವಯಂ ಉದ್ಯೋಗಕ್ಕಾಗಿ ತರಬೇತಿ, ಸಹಾಯ ಧನ, ಸ್ವಯಂ ಉದ್ಯೋಗದಲ್ಲಿ ಮಾಡಿದ ಉತ್ಪಾದನೆಗಳ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ” ಎಂದು ಹೇಳಿದರು.

ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಶ್ರೀದೇವಿ ಮಾತನಾಡಿ, “ಜಿಲ್ಲೆಯಲ್ಲಿ 26,825 ಮಂದಿ ವಿಶೇಷಚೇತನರಿದ್ದಾರೆ. ಸರ್ಕಾರದ ಸೌಲಭ್ಯಗಳ ಕುರಿತು ಇಲಾಖೆಯಿಂದ ಮಾಹಿತಿ ನೀಡುವುದರ ಜತೆಗೆ ಸರ್ಕರಿ ಸೌಲಭ್ಯಗಳನ್ನು ಒದಗಿಸಿಕೊಡಲು ಅನುಕೂಲ ಮಾಡಿಕೊಡುತ್ತದೆ. ಈಗಾಗಲೇ ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ ವಿತರಣೆ, ಪಾಕೆಟ್ ಲ್ಯಾಪ್‌ಟಾಪ್, ಸೇರಿದಂತೆ ಅನೇಕ ಸಲಕರಣೆಗಳನ್ನು ನೀಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

“ಅಂಗವಿಕಲರನ್ನು ಗುರುತಿಸಲು ರಿಮ್ಸ್ ಆಸ್ಪತ್ರೆಯಲ್ಲಿ ಗುರುತಿನ ಚೀಟಿ ನೀಡುವ ಕೆಲಸ ಮಾಡುತ್ತಿದೆ. ವಿಶೇಷಚೇತನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು” ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಕೆಪಿಡಿ ಸಂಸ್ಥೆ ಅಧ್ಯಕ್ಷ ನಾಗರಾಜ, ಜಾಫರ್, ಶೇಖರಪ್ಪ, ನವಕರ್ನಾಟಕ ಉಪಾಧ್ಯಕ್ಷ ಎಂಡಿ ಹುಸೇನ್, ಹಿರಿಯ ನಾಗರಿಕ ಹಾಗೂ ವಿಶೇಷಚೇತನರ ಸಹಾಯಕವಾಣಿ ಕೇಂದ್ರದ ಪವನ ಕಿಶೋರ್ ಪಾಟೀಲ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...