ರಾಯಚೂರು | ನಗರದ ವಿವಿಧ ಬಡಾವಣೆಗೆ ಜಿಲ್ಲಾಧಿಕಾರಿ ಕೆ.ನಿತೀಶ್ ಭೇಟಿ, ಪರಿಶೀಲನೆ

Date:

ರಾಯಚೂರು ನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಕೆ.ನಿತೀಶ ಅವರು ಭೇಟಿ ನೀಡಿ ಸಾರ್ವಜನಿಕರ ಮೂಲ ಸೌಲಭ್ಯಗಳ ಕುಡಿಯುವ ನೀರು, ಚರಂಡಿ, ವಿದ್ಯುತ್ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ಮಾಡಿದರು.

ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪಹಾರ ಸೇವಿಸಿ ಸಾರ್ವಜನಿಕರಿಗೆ ಗುಣಮಟ್ಟದ ಬೆಳಗಿನ ಉಪಹಾರ ಮತ್ತು ಊಟದ ವ್ಯವಸ್ಥೆ ಕುರಿತು ಪರಿಶೀಲಿಸಿದರು. ನಗರದ ನಿಜಲಿಂಗಪ್ಪ ಕಾಲೋನಿ ಹಾಗೂ ಹರಿಜನವಾಡ ಕಾಲೋನಿಗೆ ಸಂಚರಿಸಿ ರಸ್ತೆ, ಕುಡಿಯುವ ನೀರು ಸರಬರಾಜು, ಬಡಾವಣೆಯಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು ತಡೆಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಬಡಾವಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಸಂಚರಿಸುವ ಕುರಿತು, ವಾರ್ಡ್‌ನಲ್ಲಿ ಮನೆ ಮನೆಯಿಂದ ಸಂಗ್ರಹಿಸಿ ತ್ಯಾಜ್ಯ ಕಸ ವಿಲೇವಾರಿ ಮಾಡುವ ಕುರಿತು ವಾಹನ ಚಾಲಕರಿಗೆ ಮಾಹಿತಿ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬ ರಾಜು ಕುರಿತು ಬಡಾವಣೆಯ ನಿವಾಸಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಯಚೂರು

ಕುಡಿಯುವ ನೀರಿಗಾಗಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು ಪರಿಶೀಲನೆ ನಡೆಸಿದರು. ಚರಂಡಿ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಹೂಳೆತೆಗೆಯುವ ಕೆಲಸ ನಡೆಸಲು ನಗರಸಭೆ ಆಯುಕ್ತರಿಗೆ ಸೂಚಿಸಿದರು. ಕಾಲುವೆಯಲ್ಲಿ ಮನೆ ಕಸ ಎಸೆಯದಂತೆ, ಹಾಗೂ ಸಂಗ್ರಹ ಮಾಡಿ ನಗರಸಭೆ ಬಂಡಿಗಳಿಗೆ ನೀಡಲು ಜಾಗೃತಿ ಮೂಡಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ನಗರಾಭಿವೃದ್ಧಿ ಕೊಶ ನಿರ್ದೇಶಕ ಜಗದೀಶ ಗಂಗಣ್ಣನವರ, ನಗರಸಭೆ ಸೇರಿದಂತೆ ಅಧಿಕಾರಿಗಳು, ಮತ್ತು ನಗರಸಭೆ ಸದಸ್ಯರು ಇದ್ದರು.

ವರದಿ : ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲಾ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...