ರಾಯಚೂರು | ಫೆ.13 ರಂದು ಜಿಲ್ಲಾ ರೈತ ಸಮಾವೇಶ

Date:

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ 89ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ಫೆಬ್ರವರಿ 13 ರಂದು ಜಿಲ್ಲಾ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೈಸೂರಿನ ಟೌನ್‌ಹಾಲ್‌ನಲ್ಲಿ ಸಮಾವೇಶಕ್ಕೆ ಶಾಸಕ ದರ್ಶನ ಪುಟ್ಟಯ್ಯ ಚಾಲನೆ ನೀಡಲಿದ್ದಾರೆ. ಬಳಿಕ ಮಹಿಳಾ ಘಟಕದ ಕಾರ್ಯಾಧ್ಯಕ್ಷ ಯಧುಶೈಲ ಸಂಪತ್ ಸಂಘದ ಧ್ವಜಾರೋಹಣ ಮಾಡಲಿದ್ದಾರೆ. 12 ಗಂಟೆಗೆ ಮಾಜಿ ಶಾಸಕ, ಸಂಯುಕ್ತ ಮೋರ್ಚಾದ ರಾಷ್ಟ್ರೀಯ ಸಂಚಾಲಕ ಹಾಗೂ ಸಮಾಜವಾದಿ ಚಿಂತಕ ಡಾ. ಸುನೀಲಂ ಅವರು ಸಮಾವೇಶದ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಮಾವೇಶಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿ ಸಲಹೆಗಾರ ಬಿ ಆರ್ ಪಾಟೀಲ್, ಜಾಗೃತ ಕರ್ನಾಟಕ ಡಾ. ವಿ ವಾಸ್, ಕೃಷಿ ವಿಜ್ಞಾನ ಹಾಗೂ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ. ಪ್ರಕಾಶ ಕಮ್ಮರಡಿ ಸೇರಿದಂತೆ ಇತರರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಎಟಿಎಂ ಕಳ್ಳತನ ಪ್ರಕರಣದ ಆರೋಪಿ ಬಂಧನ

ಈ ವೇಳೆ ನರಸಿಂಗರಾವ್ ಕುಲಕರ್ಣಿ, ಪ್ರಭಾಕರ್ ಪಾಟೀಲ್, ಬೂದಯ್ಯ ಸ್ವಾಮಿ, ಪ್ರಭಾಕರ್ ರಾವ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...