ರಾಯಚೂರು | ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮೋಸ ಹೋಗಬೇಡಿ; ತೆಲಂಗಾಣದಲ್ಲಿ ಗಡಿಭಾಗದ ರೈತರ ಹೋರಾಟ 

Date:

ಕಾಂಗ್ರೆಸ್‌ಗೆ ಮತ ಹಾಕಬೇಡಿ ನಾವು ಮತ ಹಾಕಿ ಮೋಸ ಹೋಗಿದ್ದೇವೆ‌, ನೀವೂ ಮೋಸ ಹೋಗಬೇಡಿ ಎಂದು ರಾಯಚೂರು ಗಡಿ ಭಾಗದ ಕರ್ನಾಟಕದ ರೈತರು ತೆಲಂಗಾಣದಲ್ಲಿ ಹೋರಾಟ ನಡೆಸಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಇದೀಗ ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಜಾರಿಗೆ ತಂದ ಗ್ಯಾರಂಟಿಗಳನ್ನು ತೆಲಂಗಾಣದಲ್ಲಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತಿದೆ. ಯರೂ ಕಾಂಗ್ರೆಸ್‌ಗೆ ಮತ ಹಾಕಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಗಡಿ ಭಾಗದ ರಾಯಚೂರು, ಬೂರ್ದಿಪಾಡು, ವಡ್ಡೆಪಲ್ಲಿ, ಗಾಜಲುಪಾಡು ಗ್ರಾಮದ ನೂರಾರು ರೈತರು ತೆಲಂಗಾಣದ ವರಂಗಲ್, ಗದ್ವಾಲ್, ಜೋಗಳಾಂಭದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿಯನ್ನು ಜಾರಿಗೊಳಿಸುವ ಭರವಸೆ ನೀಡುತ್ತಿರುವುದನ್ನು‌ ರಾಜ್ಯದ ರೈತರು ಖಂಡಿಸಿದ್ದು, ಬಿಎಸ್‌ಆರ್ ಪಕ್ಷದ ಮುಖಂಡರು ಕರ್ನಾಟಕದ ರೈತರ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಮಹಿಳೆಯರಿಗೆ ₹2,000 ಹಣವನ್ನು ಒಂದು ತಿಂಗಳು ಹಾಕಿ ಕೈ ಬಿಟ್ಟಿದ್ದಾರೆ. ಯುವ ಜನಾಂಗಕ್ಕೆ ₹3,000 ಹಣ ಹಾಕುತ್ತಿಲ್ಲ. ಗಡಿಭಾಗದ ರಾಯಚೂರಿನಲ್ಲಿ ಬೆಳೆಗಳಿಗೆ ನೀರು ದೊರೆಯುತ್ತಿಲ್ಲ. ನೀರಿಗಾಗಿ ಹೋರಾಟ ನಡೆಸಿದ್ದೇವೆ” ಎಂದು ಆಕ್ರೋಶ ಹೊರ ಹಾಕಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: 14 ಜನರ ಬಂಧನ

“ರೈತರ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್ ನೀಡುವುದಾಗಿ ಹೇಳಿ ಇದೀಗ ಕೇವಲ 3ರಿಂದ 4 ತಾಸು ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. ಬೆಳೆಗಳಿಗೆ ನೀರಿಲ್ಲದೆ ಒಣಗಿ ಹೋಗಿ ನಷ್ಟ ಅನುಭವಿಸುತ್ತಿದ್ದೇವೆ. ನೀವೂ ಕೂಡ ಕಾಂಗ್ರೆಸ್‌ಗೆ ಮತ ಚಲಾಯಿಸಿ ಮೋಸ ಹೋಗಬೇಡಿ” ಎಂದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...