ರಾಯಚೂರು | ವಕ್ಫ್ ಬೋರ್ಡ್‌ ತಿದ್ದುಪಡಿ ಮಸೂದೆಗೆ ವಿರೋಧ: ಮನೆ ಮನೆಗೆ ತೆರಳಿ ಅಭಿಯಾನ

Date:

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಗುರುಗುಂಟ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮನೆ ಮನೆಗೆ ತೆರಳಿ ವಕ್ಫ್ ಬೋರ್ಡ್‌ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಸಹಿ ಸಂಗ್ರಹ ಮಾಡುವ ಮೂಲಕ ಜಾಗೃತಿ ಮೂಡಿಸಿದರು.

ಕೇಂದ್ರ ಸರ್ಕಾರವು ಭಾರತದಾದ್ಯಂತ ವಿಶಾಲವಾದ ವಕ್ಫ್ ಆಸ್ತಿಗಳ ಮೇಲೆ ಮುಸ್ಲಿಮರ ನಿಯಂತ್ರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಹೊಸ ತಿದ್ದುಪಡಿಗಳು ಸಮುದಾಯದ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆದಿದೆ. ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತಹಾಕಿ ರದ್ದುಪಡಿಸಬೇಕು ಎಂದು ಜನರಿಗೆ ತಿಳಿಸಿದರು.

ತಿದ್ದುಪಡಿ ಮಾಡುವ ಪ್ರಸ್ತುತ ಕ್ರಮವು ಸಂವಿಧಾನ ವಿರೋಧಿ ಮತ್ತು ನಿರಂಕುಶವಾಗಿದೆ. ಮೋದಿ ಸರ್ಕಾರವು ಮುಸ್ಲಿಂ ವಕ್ಫ್ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದೆ. ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಕ್ರಮ ದುರುದ್ದೇಶಪೂರಿತ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಸ್ ಡಿ ಪಿ ಐ ಮುಖಂಡ ಮೀರ್ ಅಲಿ ಮಾತನಾಡಿ, “ವಕ್ಫ್ ಆಸ್ತಿಗಳು ಸಾರ್ವಜನಿಕ ಆಸ್ತಿಗಳಲ್ಲ. ಇದು ಮುಸಲ್ಮಾನ ಸಮುದಾಯದ ಗಣ್ಯ ವ್ಯಕ್ತಿಗಳು ದಾನವಾಗಿ ನೀಡಿದ್ದು, ವಕ್ಫ್‌ ಆಸ್ತಿಯಾಗಿದೆ. ಸಮುದಾಯದ ಜನರು ಆರ್ಥಿಕವಾಗಿ ಸದೃಢವಾಗಲಿ ಎಂಬ ಸದುದ್ದೇಶದಿಂದ ವಕ್ಫ್‌ ಆಸ್ತಿಯಾಗಿ ಮಾರ್ಪಾಡಾಗಿದೆ” ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು | ಹಗಲು-ರಾತ್ರಿ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ನಿರತರಾದ ಬಿಬಿಎಂಪಿ ಅಧಿಕಾರಿಗಳು

ಸಂವಿಧಾನದ ಪರಿಚ್ಛೇದ 25 – 28 ರ ಅಡಿಯಲ್ಲಿ ಖಾತ್ರಿಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಬದಿಗಿಟ್ಟು ಅವರನ್ನು ಗುಲಾಮರನ್ನಾಗಿ ಮಾಡುವುದು ಉದ್ದೇಶಪೂರ್ವಕ ಯೋಜನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೋಮುವಾದಿ ಅಜೆಂಡಾವನ್ನು ಎಸ್ ಡಿಪಿಐ ಪಕ್ಷ ಬಲವಾಗಿ ಪ್ರತಿಭಟಿಸುತ್ತದೆ. ಸರ್ಕಾರವು ಈ ಸಂವಿಧಾನ ವಿರೋಧಿ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...