ರಾಯಚೂರು | ಕುಡಿಯುವ ನೀರಿನ ಸಮಸ್ಯೆ : ಶಾಸಕ ಮಾನಪ್ಪ ವಜ್ಜಲಗೆ ತರಾಟೆ ತೆಗೆದುಕೊಂಡ ಗ್ರಾಮಸ್ಥರು

Date:

ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ.

ಪುರಸಭೆಯ ವ್ಯಾಪ್ತಿಯ ಕಸದ ವಾಹನಗಳನ್ನು ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಉದ್ಘಾಟನೆಗೆ ಆಗಮಿಸಿದರು. ಈ ವೇಳೆ ಜಮಾಯಿಸಿದ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಘೇರಾವ್‌ ಹಾಕಿದರು.

ಸುಮಾರು ದಿನಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ತಮಗೆ ಸಂಬಂಧವೇ ಇಲ್ಲದಂತೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಬಾವಿ, ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರತಿ ದಿನ ನೀರು ತರಲು ಒಂದು ಕಿ.ಮೀ. ಹೋಗಬೇಕು. ಈ ಸಮಸ್ಯೆ ತಕ್ಷಣವೇ ಬಗೆಹರಿಸಬೇಕೆಂದು ನಿವಾಸಿಗಳು ಪಟ್ಟು ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಯುದ್ಧ ಪರಿಸ್ಥಿತಿಯಲ್ಲಿ ರಕ್ಷಣೆ ಸಿದ್ದತಾ ಅಣಕು ಕಾರ್ಯಾಚರಣೆ

ʼನೀರಿನ ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಿಳಿಸುವೆ. ಗ್ರಾಮಸ್ಥರ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಎಂದು ಶಾಸಕ ಮಾನಪ್ಪ ವಜ್ಜಲ್ ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...