ರಾಯಚೂರು | ʼಈದಿನʼ ಫಲಶೃತಿ : ಸ್ವಚ್ಛಗೊಂಡ ಸರ್ಕಾರಿ ಶಾಲಾ ಮೈದಾನ; ಮಕ್ಕಳ ಮೊಗದಲ್ಲಿ ನಗೆ

Date:

ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಮಳೆ ನೀರು ಸಂಗ್ರಹವಾಗಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದ್ದು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ಮೈದಾನದಲ್ಲಿ ಮಕ್ಕಳು ಆಟವಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ʼಈದಿನ.ಕಾಮ್‌ʼ ನಲ್ಲಿ ವರದಿ ಪ್ರಕಟವಾದ ಬೆನ್ನಲೇ ಎಚ್ಚೆತ್ತ ಅಧಿಕಾರಿಗಳು ಶಾಲಾ ಆವರಣ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.

ಶಾಲಾ ಅವ್ಯವಸ್ಥೆ ಕುರಿತು ಜೂನ್‌ 17ರಂದು ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಸಮಸ್ಯೆ ಪರಿಹಾರಕ್ಕೆ ಮುಂದಾಗಿ ಶಾಲಾ ಮೈದಾನ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಸ್ವಲ್ಪ ಮಳೆ ಬಂದರೆ ಸಾಕು ಶಾಲಾ ಮೈದಾನದಲ್ಲಿ ನೀರು ಸಂಗ್ರಹವಾಗಿ ಮಕ್ಕಳು ಓಡಾಡಲು ಬಾರದಂತಹ ಪರಿಸ್ಥಿತಿ ಇತ್ತು. ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗುವ ಹಿನ್ನೆಲೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದರು. ಈ ಬಗ್ಗೆ ಪೋಷಕರು ʼಈದಿನʼ ಜೊತೆಗೆ ಮಾತನಾಡಿ ಅಳಲು ತೋಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 18 at 9.37.30 AM
ಈ ಹಿಂದೆ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ಹುಲ್ಲು ಬೆಳೆದು ಅವ್ಯವಸ್ಥೆಯ ತಾಣವಾಗಿತ್ತು.

ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಸ್ಥಳೀಯ ನಿವಾಸಿ ಬಸವರಾಜ್ ಖರಾಬದಿನ್ನಿ ಮಾತನಾಡಿ, ʼನಮ್ಮೂರಿನ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ ಮಳೆ ನೀರು ಸಂಗ್ರಹವಾಗಿ ಮಕ್ಕಳ ಓಡಾಟಕ್ಕೆ ತುಂಬಾ ತೊಂದರೆ ಅನುಭವಿಸುತ್ತಿದ್ದರು. ಇದರಿಂದ ಮಕ್ಕಳಿಗೆ ಚರ್ಮ ರೋಗ ಸೇರಿದಂತೆ ಸಾಂಕ್ರಮಿಕ ರೋಗದ ಭೀತಿ ಕಾಡುತ್ತಿತ್ತು. ಈ ಬಗ್ಗೆ ಈದಿನ.ಕಾಮ್ ಮಾಧ್ಯಮ ವರದಿ ಪ್ರಕಟಿಸಿದ ಕಾರಣಕ್ಕೆ ಅಧಿಕಾರಿಗಳು ಶಾಲಾ ಆವರಣ ಸ್ವಚ್ಛಗೊಳಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆʼ ಎಂದು ತಿಳಿಸಿದರು.

ಇದನ್ನೂ ಓದಿ : ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ನಮ್ಮೂರಿನ ಶಾಲಾ ಸಮಸ್ಯೆ ಕುರಿತು ಸುದ್ದಿ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಲ್ಪಿಸಿದ ಜನಪರ ಕಾಳಜಿಯ ʼಈದಿನʼ ಮಾಧ್ಯಮ ತಂಡಕ್ಕೆ ಗ್ರಾಮದ ಶರಣು ಮದ್ದಮಗುಡ್ಡಿ ಮತ್ತಿತರರು ಕೃತಜ್ಞತೆ ಸಲ್ಲಿಸಿದ್ದಾರೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...