ರಾಯಚೂರು | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದೇ ಚುನಾವಣಾ‌ಧಿಕಾರಿ ಪರಾರಿ

Date:

ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್‌ನ ಚುನಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ಅಂತಿಮ ಕಣದಲ್ಲಿರುವವರ ಅಭ್ಯರ್ಥಿಗಳನ್ನು ಪ್ರಕಟಿಸಿದೇ ರಾಯಚೂರು ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಪರಾರಿಯಾಗಿದ್ದಾರೆ ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಮಹಾಂತೇಶ ಬಿರಾದಾರ ಆರೋಪಿಸಿದ್ದಾರೆ.

“ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜ್ಯ ಪರಿಷತ್ ಮತ್ತು ಖಜಾಂಚಿ ಹುದ್ದೆಗೆ ಒಟ್ಟು ಕ್ರಮವಾಗಿ ಅಧ್ಯಕ್ಷ ಹುದ್ದೆಗೆ ಆರು ಜನ ಮತ್ತು ರಾಜ್ಯ ಪರಿಷತ್ ಹಾಗೂ ಖಜಾಂಚಿ ಹುದ್ದೆಗೆ ಮೂರು ಮೂರು ಜನ ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ಭೀಮರಾಜ ಹವಾಲ್ದಾರ್, ಸುರೇಶ ಕುರ್ಡಿ, ರಾಘವೇಂದ್ರ ಎಂಬ ಮೂರು ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ ಮಹಾಂತೇಶ್ ಬಿರಾದಾರ್ ಕೃಷ್ಣ ಮತ್ತು ಆಂಜನೇಯ ಕಾವಲಿ ಅಭ್ಯರ್ಥಿಗಳಾಗಿ ಅಧ್ಯಕ್ಷ ಹುದ್ದೆಗೆ ಉಳಿದಿದ್ದು, ಉಳಿದ ಹುದ್ದೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಯಥಾವತ್ತಾಗಿ ಮೂರು ಮಂದಿ ಕಣದಲ್ಲಿದ್ದಾರೆ. ಆದರೆ, ಕಣದಲ್ಲಿರುವ ಅಂತಿಮ ಪಟ್ಟಿ ಪ್ರಕಟಿಸದೇ ಚುನಾವಣೆ ಅಧಿಕಾರಿ ಭೀಮಪ್ಪ ನಾಯಕ ಅವರು ಅಭ್ಯರ್ಥಿ ಕೃಷ್ಣ ಅವರ ಪರ ಲಾಬಿ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೇ ಪರಾರಿಯಾಗಿರುವ ಬಗ್ಗೆಯೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ” ಎಂದು ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...