ರಾಯಚೂರು | ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು: ಫಾದರ್ ಡಾನ್ ಲೋಬೋ

Date:

ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಗಿಡ ಮರಗಳನ್ನು ಬೆಳೆಸಿರುವುದರಿಂದ ಶುದ್ಧವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಲೊಯೋಲಾ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಡಾನ್ ಲೋಬೋ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಮಳಿ ಹೊಸೂರು ಗ್ರಾಮದಲ್ಲಿ ಪರಿಸರ ಕಾಳಜಿ, ಶಿಕ್ಷಣದ ಅರಿವು ಹಾಗೂ ಶ್ರಮದಾನ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಮತ್ತು ಲಯೋಲ ಸಂಸ್ಥೆ ಆಯೋಜಿಸಿದ್ದವು. ಗ್ರಾಮದ ಶಾಲೆಯ ಆವರಣದಲ್ಲಿ ಪರಿಸರ ಜಾಗೃತಿಯ ಅಂಗವಾಗಿ ಸಸಿಗಳನ್ನು ಅಧಿಕಾರಿಗಳು ಮತ್ತು ಮುಖಂಡರು ನೆಟ್ಟರು.

ಈ ಸಂದರ್ಭದಲ್ಲಿ ಪಿಡಿಓ ಮಲ್ಲೇಶ್ ಹಾಗೂ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಮತ್ತು ಎಸ್‌ಬಿಐ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಸಲಹೆಗಾರ ಚಂದ್ರಶೇಖರ ಸೊಪ್ಪಿಮಠ, ಗ್ರಾಮ ಪಂಚಾಯತ್ ಸದಸ್ಯ ಯಲ್ಲಪ್ಪ, ಅಯ್ಯಪ್ಪ, ರೈತ ಮುಖಂಡ ರಾಜಸಾಬ್, ಲೋಯೋಲ ಸಮಾಜ ಸೇವ ಕೇಂದ್ರದ ಮರಿಯಪ್ಪ, ಬಸವಲಿಂಗ, ಸಿಮೋನ್, ಪ್ರಕಾಶ್, ಮತ್ತು ಸಂತ ಜೋಸೆಫರ ವಿಶ್ವವಿದ್ಯಾಲಯ ಬೆಂಗಳೂರಿನ ಉಪನ್ಯಾಸಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...