ರಾಯಚೂರು | ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಿ – ಜಿ.ಕುಮಾರನಾಯಕ

Date:

ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಕೃಷಿ‌ ಚಟುವಟಿಕೆಗಳು‌ ಚುರುಕುಗೊಂಡಿವೆ. ರೈತರ ಬೆಳೆಗಳಿಗೆ ಅನುಗುಣವಾಗಿ ರೈತರ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರಿಗೆ ರಾಯಚೂರು – ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ ಕುಮಾರ ನಾಯಕ ಮನವಿ ಸಲ್ಲಿಸಿದರು.

ನವದೆಹಲಿಯ ಕೇಂದ್ರ ಸಚಿವರ ಕಾರ್ಯಾಲಯದಲ್ಲಿ ಭೇಟಿ ನೀಡಿ ರಾಜ್ಯದಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ರೈತರ ಬೇಡಿಕೆ ಹೆಚ್ಚಿರುವುದರಿಂದ ಶೀಘ್ರ ಹೆಚ್ಚುವರಿ ರಸಗೊಬ್ಬರ ಹಂಚಿಕೆ ಮಾಡುವಂತೆ ಮಾನವಿ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಠಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯರಗೇರಾ ತಾಲ್ಲೂಕಿಗೆ ಹೋರಾಟ –ಸಿಎಂ ಭರವಸೆ ; ನಿಜಾಮ್

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಎಲ್ಲೆಡೆ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಹಾಗಾಗಿ ರಸಗೊಬ್ಬರಕ್ಕೆ ರೈತರಿಂದ ಹೆಚ್ಚಿನ ಬೇಡಿಕೆಯಿದೆ. ರೈತರ ಬೇಡಿಕೆ ಸಮಯದಲ್ಲಿ ರಸಗೊಬ್ಬರ ಪೂರೈಸದಿದ್ದರೆ ರೈತರು ಸಂಕಷ್ಠ ಎದುರಿಸಲಿದ್ದಾರೆ. ಕೂಡಲೇ ರೈತರ ಬೇಡಿಕೆಯಂತೆ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ತಿಳಿಸಿದರು.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...