ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

Date:

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು.

ಹೋರಾಟ ಕುರಿತು ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಮಾತನಾಡಿ, “ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನ್ಯಾಯಯುತವಾಗಿ ದೊರೆಯುತ್ತದೆಂದು ನಂಬಿದ್ದ ರೈತರು ಬೆಳೆವಾರು ವಂತಿಗೆ ಹಣವನ್ನು ಇನ್ಷೂರೆನ್ಸ್‌ ಕಂಪನಿಗೆ ನಗದು ತುಂಬಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು ಮಧ್ಯವರ್ತಿಗಳು ಸೇರಿ ಫಲಾನುಭವಿಗಳಿಗೆ ಹಣ ಸಿಗದೇ ಬೇರೆಯವರಿಗೆ ಸಿಕ್ಕಿದೆ ಕೂಡಲೇ ತನಿಖೆ ಮಾಡಿ ನಿಜವಾದ ಫಲಾನುಭವಿಗಳಿಗೆ ಸಿಗುವಂತೆ ಮಾಡಬೇಕು” ಎಂದು ಒತ್ತಾಯಿಸಿದರು.

“ರೈತರ ಬೆಳೆ ನಷ್ಟಕ್ಕೆ ಕೃಷಿ ಇಲಾಖೆ ಕಂದಾಯ ಇಲಾಖೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ ವರದಿ ಸಲ್ಲಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನೆ ಮಾಡಿ ಬೆಳೆಹಾನಿ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಮಗಳನ್ನು ಮೀರಿ ಫಸಲ್ ಭೀಮಾ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ.ಈ ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲ ಇಲಾಖೆಯ ಅಧಿಕಾರಿಗಳ ಮೇಲೆ ಹಾಗೂ ಯೋಜನೆಯ ಹಣ ದುರುಪಯೋಗ ಮಾಡಿಕೊಂಡಿರುವ ಮಧ್ಯವರ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಬೇಕು. ವಿಮಾ ಕಂಪೆನಿಗೆ ವಂತಿಗೆ ತುಂಬಿದ ನಿಜವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಕೃಷಿ ಇಲಾಖೆಯಿಂದ ಪ್ರವೀಣ್ ಹಾಗೂ ದೇವದುರ್ಗ ತಾಲೂಕು ದಂಡಾಧಿಕಾರಿ ಚನ್ನಮಲ್ಲಪ್ಪ ಗಂಟಿ, ನಾಡ ತಹಶೀಲ್ದಾರ್ ವಿಕಾಸ ಕೋಳೂರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಮೋಸ ಮಾಡಿದವರ ವಿರುದ್ಧ ನಾಲ್ಕು ದಿನಗಳೊಳಗೆ ಸೂಕ್ತ ಕ್ರಮ‌ ಜರುಗಿಸುವುದಾಗಿ ಪತ್ರದ ಮೂಲಕ ಲಿಖಿತ ಭರವಸೆ ನೀಡಿದರು.

ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಧರಣಿ ಹಿಂಪಡೆದುಕೊಂಡರು. ಜೆಡಿಎಸ್ ಮುಖಂಡ ಸಿದ್ದನಗೌಡ ಮೂಡಲಗುಂಡ ಹೋರಾಟಕ್ಕೆ ಬೆಂಬಲ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ

ತಾಲೂಕು ಅಧ್ಯಕ್ಷ ಹನುಮಂತ ಗುರಿಕಾರ, ಮೌನೇಶ ಜಾಲಹಳ್ಳಿ, ದುರ್ಗಪ್ಪ ವರಟಿ, ರಂಗನಾಥ ಬುಂಕಲದೊಡ್ಡಿ, ಹನುಮಂತ ಮಂಡಲಗುಡ್ಡ, ಮಲ್ಲಪ್ಪ ಮುಂಡರಗಿ, ಮೂರ್ತಿ, ಭೂಜಪ್ಪ, ರೈತರುಗಳಾದ ಬಸವರಾಜ ತೇಕರು, ತಮ್ಮಣ್ಣ ಸೇರಿದಂತೆ ಇತರರು ಇದ್ದರು.

ವರದಿ : ಶಿವರಾಂ ಕಟ್ಟಿಮನಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...