ರಾಯಚೂರು | ತುಂಗಭದ್ರಾ ಎಡದಂಡೆ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುವಂತೆ ರಸ್ತೆ ತಡೆದು ಪ್ರತಿಭಟನೆ

Date:

ಸರಿಯಾದ ನಿರ್ವಹಣೆ ಇಲ್ಲದ ಕಾರಣ ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುತ್ತಿಲ್ಲ ಎಂದು ಸಿಪಿಐಎಂ ಸಂಘಟನೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ʼತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬರುವ 36, 54, 46, ವಿತರಣಾ ಕಾಲುವೆಯಲ್ಲಿ ಡಿಜೈನ್ ಪ್ರಕಾರ ನೀರು ಬಿಡುಗಡೆಯಾಗುತ್ತಿಲ್ಲ. ಈಗಾಗಲೇ ರೈತರು ಹೊಲದಲ್ಲಿ ಸಸಿಮಡಿಗಳನ್ನು ನೆಟ್ಟಿದ್ದು, ನೀರಿಲ್ಲದಂತಾಗಿದೆ. ಕೃಷಿ ಅಧಿಕಾರಿಗಳ ಪ್ರಕಾರ 30 ದಿನಗಳಲ್ಲಿ ಸಸಿ ನಾಟಿ ಮಾಡಿದರೆ ಮಾತ್ರ ಉತ್ತಮ ಇಳುವರಿ ಬರಲು ಸಾಧ್ಯವೆಂದು ಹೇಳಿದ್ದರು. ಆದರೆ ಸಮರ್ಪಕವಾಗಿ ನೀರಿಲ್ಲದೆ ಇದರಿಂದ ನಾಟಿ ಮಾಡಲು ಸಸಿಮಡಿ ಬರುವುದೂ ಕಷ್ಟಕರವಾಗಿದೆʼ ಎಂದು ಅಳಲು ತೋಡಿಕೊಂಡರು.

ʼತುಂಗಭದ್ರಾ ಡ್ಯಾಂನಲ್ಲಿ ನೀರಿನ ಕೊರತೆಯಿಲ್ಲ. ಅದರೂ ಡಿಸೆಂಬರ್ 15ರಿಂದ ಸರಿಯಾಗಿ 3,800 ಕ್ಯೂಸೆಕ್ ನೀರು‌ ಹರಿಸಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಅಧಿಕಾರಿಗಳ ಸರಿಯಾದ ನಿರ್ವಹಣೆಯಿಲ್ಲದ ಕಾರಣ ರೈತರಿಗೆ ನೋವುಂಟಾಗಿದೆ. ಸಂಘಟನಾಕಾರರು, ರೈತರು ಪ್ರತಿದಿನ ನೀರಾವರಿ ಅಧಿಕಾರಗಳನ್ನು ದೂಷಿಸುವುದೇ ಆಗಿದೆ. ಜನಪ್ರತಿನಿಧಿಗಳೂ ಕೂಡಾ ರೈತರ ಬಗ್ಗೆ ಗಮನ ಹರಿಸುತ್ತಿಲ್ಲʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

ʼತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ನಿಗದಿಪಡಿಸಿದ ನೀರು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಈ ಕುರಿತ ಕೂಡಲೇ ಸ್ಪಂದಿಸಿ ತೊಂದರೆಗಳನ್ನು ಸರಿಪಡಿಸಿ ನಿಗದಿತ ಗೇಜ್ ನೀಡಬೇಕು. ಇಲ್ಲದೆ ಹೋದಲ್ಲಿ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸಂಘಟನೆ ಮೊಕದ್ದಮೆ ಹೂಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...