ರಾಯಚೂರು | ಕೃಷ್ಣ ನ್ಯಾಯಾಧೀಕರಣ ತೀರ್ಪು ಜಾರಿಗೆ ಆಗ್ರಹಿಸಿ ಫೆ.9 ರಂದು ರೈತರ ನಡೆ, ಆಲಮಟ್ಟಿ ಕಡೆ; ಲಕ್ಷ್ಮೀಕಾಂತ ಮದ್ದರಕಿ

Date:

ಕೃಷ್ಣ ನ್ಯಾಯಾಧೀಕರಣ ತೀರ್ಪು ಜಾರಿಗೊಳಿಸಿ ಕೃಷ್ಣ ಮೇಲ್ದಂಡೆ ಮೂರನೇ ಹಂತದ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಹಾಗೂ ರೈತ ಸೇನೆಯಿಂದ ಫೆ.9 ರಂದು ರೈತರ ನಡೆ ಆಲಮಟ್ಟಿ ಜಲಾಶಯದ ಕಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟನೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ್ ಮದ್ದರಕಿ ಹೇಳಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿ 9 ಉಪ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಬೇಕಾದ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ಕೃಷ್ಣ ನ್ಯಾಯಾಧೀಕರಣದ ತೀರ್ಪು ಜಾರಿಗೆ ಕಾನೂನಾತ್ಮಕ ಸಮಸ್ಯೆ ಪರಿಹರಿಸಿ ಅಧಿಕೃತ ಅಧಿಸೂಚನೆ ಹೊರಡಿಸಬೇಕು. ರಾಜ್ಯ ಪಾಲಿನ ನೀರು ಬಳಕೆ ಬದ್ದತೆ ತೋರಬೇಕೆಂದು ಆಗ್ರಹಿಸಿ ವಿವಿಧ ಜಿಲ್ಲೆಗಳಿಂದ ರೈತರು ಮುದ್ದೇಬಿಹಾಳ ಸಮಾವೇಶಗೊಂಡು ಅಲ್ಲಿಂದ ಅಲಮಟ್ಟಿ ಜಲಾಶಯಕ್ಕೆ ತೆರಳಿ ಬೃಹತ್ ಸಮಾವೇಶ ನಡೆಸಲಾಗುತ್ತದೆ ಎಂದರು.

ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅಗತ್ಯ ಅನುದಾನವನ್ನು ಒದಗಿಸಬೇಕು. ಭೂ ಸ್ವಾಧೀನ, ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಈಗಾಗಲೇ ಸುದೀರ್ಘ ವರ್ಷಗಳು ಕಳೆದುಹೋಗಿವೆ. ತೆಲಂಗಾಣ ಮತ್ತು ಮಹಾರಾಷ್ಟ್ರಗಳ ಆಕ್ಷೇಪದಿಂದ ಅಲಮಟ್ಟಿ ಜಲಾಶಯ ಎತ್ತರ ಕಾಮಗಾರಿ ಬಾಕಿ ಉಳಿದಿದೆ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಯೋಜನೆ ಜಾರಿಗೆ ಮುಂದಾಗಬೇಕೆಂದು ಆಗ್ರಹಿಸಿ ನಡೆಯಲಿರುವ ಹೋರಾಟದಲ್ಲಿ ಮಠಾಧೀಶರು, ವಿವಿಧ ರೈತ ಸಂಘಟನೆಗಳು, ರೈತರು ಸೇರಿದಂತೆ ಎಲ್ಲರು ಬೆಂಬಲಿಸಿ ಭಾಗವಹಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣ ಬಲದಂಡೆ ಕಾಲುವೆಯ 95 ಕಿಮೀ ರಿಂದ 168 ಕಿಮೀವರೆಗಿನ ಮುಖ್ಯ ಕಾಲುವೆ ಹಾಗೂ ಉಪಕಾಲುವೆಗಳ ಕಾಮಗಾರಿ ಶೇ. 85 ರಷ್ಟು ಪೂರ್ಣಗೊಂಡಿದೆ. ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕೊನೆಭಾಗದ ಗ್ರಾಮಗಳಿಗೆ ಕೂಡಲೇ ನೀರು ಒದಗಿಸುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಇಂದ್ರಜಿತ್ ಯಾದವ, ಜಿಲ್ಲಾ ಕಾರ್ಯಾಧ್ಯಕ್ಷ ಮುಜಾಹಿದ್ ಮರ್ಚಡ್, ಮಲ್ಲಿಕಾರ್ಜುನ, ಮಹಾದೇವ ಯಾದವ, ಸುರೇಶ ಪೂಜಾರಿ,ಆನಂದಕುಮಾರ, ಯಲ್ಲಪ್ಪ ಅಂಬಿಗೇರ, ಗಂಗಪ್ಪ ತಿಮ್ಮಾಪುರು, ಗಂಗಪ್ಪ, ಯಂಕಣ್ಣ, ಬಸವರಾಜ ಕರಿಕಾಳ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...