ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

Date:

ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್‌ ಪ್ರತಿಭಟನಾ ಹೋರಾಟ ಮಾಡಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ವಕೀಲ ಎಸ್ ಮಾರೆಪ್ಪ ಹೇಳಿದರು.

ಅವರಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿ, “ಪರಿಶಿಷ್ಟ ಜಾತಿಯ ಒಳಮೀಸಲಾತಿಗಾಗಿ ರಾಜ್ಯ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ನಾಗಮೋಹನದಾಸ್ ಪರಿಶೀಲನಾ ಸಮಿತಿ ವರದಿ ನೀಡಲು ಮಾರ್ಚ್ 1 ಗಡುವು ಇದೆ. ಆದರೆ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡುತ್ತಿಲ್ಲ ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ಸರ್ಕಾರಕ್ಕೆ‌ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಆಯೋಗದ ಕಾರ್ಯಸೂಚಿಗಳು‌ ನೆನೆಗುದಿಗೆ ಬೀಳುವಂತಾಗಿದೆ” ಎಂದು ಆರೋಪಿಸಿದರು.

“ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗುವವರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕ ಮಾಡಬಾರದು ಎಂದು ಪ್ರತಿಭಟನೆಗಳು ಮಾಡಿದ‌ ಬಳಿಕ ಸರ್ಕಾರ ಅದಕ್ಕೆ ಸ್ಪಂದಿಸಿ ನೇಮಕ ಪ್ರಕ್ರಿಯೆ ಮುಂದೂಡಿತ್ತು. ಆದರೆ ಸಚಿವ ಮಹದೇವಪ್ಪ ಸಾವಿರರು ಹುದ್ದೆಗಳನ್ನು ಭರ್ತಿ ಮಾಡುವ ತೀರ್ಮಾನ ಮಾಡಿರುವುದು ಖಂಡನೀಯ” ಎಂದರು.

“ಒಳಮೀಸಲಾತಿ ಇನ್ನೂ ಜಾರಿ ಆಗಿಲ್ಲ. ಇದೀಗ ಏಕಾಏಕಿ ಹುದ್ದೆ ಭರ್ತಿಗೆ ಮುಂದಾಗಿರುವುದು ಸರ್ಕಾಋ ದಲಿತರ ವಿರೋಧಿ ನಿಲುವು ಹೊಂದಿದೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ಸಮುದಾಯದ ಪ್ರಮುಖರಾದ ಸಚಿವರೇ, ವರದಿ ಜಾರಿಗೆ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದನ್ನು ಖಂಡಿಸಿ ಅವರ ವಿರುದ್ಧ ಹೋರಾಟ ಮಾಡಲು ದಲಿತಪರ ಸಂಘಟನೆಗಳಿಂದ ತೀರ್ಮಾನಿಸಲಾಗಿದೆ. ಎಲ್ಲ ದಲಿತಪರ ಸಂಘಟನೆಗಳು ಸರ್ಕಾರದ ಕೈಗೊಂಬೆಯಂತೆ ನಡೆಯುತ್ತಿವೆ. ಇದರಿಂದ ಸರಕಾರ ಎಸ್‌ಸಿ ಎಸ್‌ಟಿ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಕೆ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಪಕ್ಷಿಗಳ ಸರಣಿ ಸಾವಿನಿಂದ ಜನರಲ್ಲಿ ಆತಂಕ; ಹಕ್ಕಿಜ್ವರದ ಶಂಕೆ

ಈ ವೇಳೆ ಹೇಮರಾಜ್ ಆಸ್ಕಿಹಾಳ, ನರಸಿಂಹಲು, ತಾಯಪ್ಪ, ಲಕ್ಷ್ಮಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...