ನಗರದ ಹಳೆಯ ಡಿಡಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ವರ್ಷಗಳ ಹಳೆಯ ದಾಖಲೆಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
10×10 ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಾಖಲೆ ಸುಟ್ಟಿದ ಹೊರತಾಗಿ ಯಾವುದೇ ಅನಾಹುತ ಸಂಭವಿಸಿಲ್ಲ, ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥಸಂಚಲನದಲ್ಲಿ ಪಿಡಿಒ ಭಾಗಿ; ಕ್ರಮಕ್ಕೆ ಒತ್ತಾಯ
ಡಿಡಿಪಿಐ ಕಚೇರಿ ಶಿಥಿಲಾವಸ್ಥೆಯಲ್ಲಿರುವ ಕಾರಣ ಆಝಾದ್ ನಗರದ ಬಾಡಿಗೆ ಕಟ್ಟಡದಲ್ಲಿ ಆಡಳಿತ ನಡೆಸಲಾಗುತ್ತಿತ್ತು, ಈಚೆಗೆ ಯಕ್ಲಾಸಪುರದ ಹೊಸ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಯಾರೊ ಕಿಡಿಗೇಡಿಗಳು ದಾಖಲೆಗಳಿಗೆ ಬೆಂಕಿ ಹಚ್ಚಿದ್ದಾರೆ ಇದು ಶಾರ್ಟ್ ಸರ್ಕ್ಯೂಟ್ ಅಲ್ಲ, ಈ ಬಗ್ಗೆ ಕೆಲ ದಾಖಲೆ ಪರಿಶೀಲಿಸಲಾಗಿದೆ ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂದು ಡಿಡಿಪಿಐ ಕಾಳಪ್ಪ ಬಡಿಗೇರ್ ತಿಳಿಸಿದರು.





