ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ಐದು ಜನರನ್ನು ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.
ಮಿರ್ಜಾಪೂರ ಗ್ರಾಮದ ಈ ಐದು ಮಂದಿಯನ್ನು ಕಲಂ 55 ಕೆ.ಪಿ. ಕಾಯ್ದೆಯಡಿ ಗಡಿಪಾರು ಮಾಡಲಾಗಿದ್ದು, ಅವರಲ್ಲಿ ನಾಲ್ವರನ್ನ ವಿಜಯಪುರ ಜಿಲ್ಲೆಗೆ ಹಾಗೂ ಒಬ್ಬರನ್ನು ವಿಜಯನಗರ ಜಿಲ್ಲೆಗೆ ಕಳುಹಿಸಲಾಗಿದೆ.
ಮಲ್ಲಿಕಾರ್ಜುನ ಮಲದಕಲ್ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಗೆ, ಅರೋಲಿ ಭೀಮಣ್ಣ ಇಂಡಿ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಗೆ, ಗೋರೆಪ್ಪ ಇಂಡಿ ತಾಲೂಕಿನ ಹೋರ್ತಿ ಪೊಲೀಸ್ ಠಾಣೆ ವ್ಯಾಪ್ತಿಗೆ, ತಾಯಪ್ಪ ಇಂಡಿ ತಾಲೂಕಿನ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಗೆ, ಆಲಾದಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಾಹೇತರ ಸಂಬಂಧ ಶಂಕೆ; ವ್ಯಕ್ತಿ ಕೊಲೆ
ಗಡಿಪಾರು ಅವಧಿ ನವಂಬರ್ 6 ರಿಂದ ಜನವರಿ 6 2026 ರವರೆಗೆ ನಿಗದಿಪಡಿಸಲಾಗಿದ್ದು, ಆ ಅವಧಿಯಲ್ಲಿ ಗಡಿಪಾರು ಮಾಡಲ್ಪಟ್ಟವರು ಆಯಾ ಪೊಲೀಸ್ ಠಾಣೆಗಳಿಗೆ ಹಾಜರಾಗಿ ವರದಿ ನೀಡಬೇಕು ಎಂದು ಸೂಚಿಸಲಾಗಿದೆ. ಆಯಾ ಠಾಣಾಧಿಕಾರಿಗಳಿಗೆ ಗಡಿಪಾರು ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸುವಂತೆ ಹಾಗೂ ಅವರು ರಾಯಚೂರು ಜಿಲ್ಲಾ ವ್ಯಾಪ್ತಿಗೆ ಪ್ರವೇಶಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.





