ರಾಯಚೂರು | ವಿಷಮಯ ಆಹಾರ ಸೇವನೆ : ಒಂದೇ ಕುಟುಂಬದ ಮೂವರ ಸಾವು, ಮೂವರು ಆಸ್ಪತ್ರೆಗೆ

Date:

ವಿಷಹಾರ ಮಿಶ್ರಿತ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದು ನಾಲ್ಕು ಜನರ ಸ್ಥಿತಿ ಗಂಭೀರವಾದ ಘಟನೆ ಸಿರವಾರ ತಾಲೂಕಿನ ಕಡೋಣಿ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಕುಟುಂಬದ ರಮೇಶ ನಾಯಕ (38), ಇವರ ಪುತ್ರಿಯರಾದ ನಾಗಮ್ಮ (8) ಮೃತಪಟ್ಟಿದ್ದಾರೆ. ರಮೇಶ ನಾಯಕ ಪತ್ನಿ ಪದ್ಮಾ (35), ಪುತ್ರ ಕೃಷ್ಣ (12), ಪುತ್ರಿಯರಾದ ದೀಪಾ (6) ಹಾಗೂ ಚೈತ್ರಾ (10) ತೀವ್ರ ಅಸ್ವಸ್ಥರಾಗಿದ್ದು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್‌ಗೆ ದಾಖಲಿಸಲಾಗಿದೆ.

ಜಮೀನಿನಲ್ಲಿ ಹತ್ತಿ ಬೆಳೆದಿದ್ದು ಬದುವಿನಲ್ಲಿ ಮನೆ ಬಳಕೆಗಾಗಿ ತರಕಾರಿ ಬೆಳೆಸಿದ್ದಾರೆ. ಹೊಲದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಚವಳೆಕಾಯಿ ಪಲ್ಯ ತಯಾರಿಸಿ ಕುಟುಂಬ ಸದಸ್ಯರು ರಾತ್ರಿ ಊಟ ಮಾಡಿದ್ದರು. ಹೊಲದಲ್ಲಿನ ಚವಳೆಕಾಯಿ ತಂದು ಪಲ್ಯ ತಯಾರಿಸಿ ರಾತ್ರಿ ಊಟ ಮಾಡಿದ ನಂತರ ವಾಕರಿಕೆ, ವಾಂತಿ, ಬೇಧಿ ಕಾಣಿಸಿಕೊಂಡಿದೆ, ಚಿಕಿತ್ಸೆಗಾಗಿ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಕವಿತಾಳ ಠಾಣೆ ಪಿಎಸ್‌ಐ ವೆಂಕಟೇಶ ನಾಯಕ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...