ರಾಯಚೂರು | ಒಳಮೀಸಲಾತಿ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲು ಒತ್ತಾಯ

Date:

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡಗಳ ಶೇ.17+7 ಮೀಸಲಾತಿಯನ್ನು 09ನೇ ಶೇಡ್ಯೂಲ್‌ಗೆ ಸೇರಿಸುವ ತಿದ್ದುಪಡಿ ಮಸೂದೆ ಮತ್ತು ಒಳಮೀಸಲಾತಿಗಾಗಿ ಸಂವಿಧಾನ ಪರಿಚ್ಛೇದ 341(3)ಕ್ಕೆ ತಿದ್ದುಪಡಿ ಮಸೂದೆಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶದನಲ್ಲಿ ಮಂಡಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಒತ್ತಾಯಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಶೇ.03 ಮತ್ತು ಶೇ.07ರಷ್ಟು ಮೀಸಲಾತಿ ಹೆಚ್ಚಿಸಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ನಾಗಮೋಹನ್ ದಾಸ್‌ ಸಮಿತಿಯ ಶಿಫಾರಸ್ಸುಗಳನ್ನು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಹಿಂದಿನ ಸರ್ಕಾರದ ಆದೇಶವು ಸುಪ್ರೀಂಕೋರ್ಟಿನ ಶೇ.50ರಷ್ಟು ಮೀಸಲಾತಿಯ ಮಿತಿಯನ್ನು ಮೀರಿರುವುದರಿಂದ ಮೀಸಲಾತಿಗೆ ತಿದ್ದುಪಡಿ ತಂದು ಸಂವಿಧಾನದ 09ನೇ ಶೆಡ್ಯೂಲ್‌ಗೆ ಸೇರಿಸಲು ಆ ಸರ್ಕಾರವು ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಕೇಂದ್ರವು ಮುಂಗಾರು ಅಧಿವೇಶನದಲ್ಲಿ ತಿದ್ದುಪಡಿಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇಂದ್ರ ನಾಯಕರು ಒಳ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ಭರವಸೆಗಳು ಸುಳ್ಳಾಗಿವೆ. ಸಂಸತ್ತಿನ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ನಾರಾಯಣ ಸ್ವಾಮಿ ಅವರು ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ, ಒಳಮೀಸಲಾತಿ ಜಾರಿಗೆ ತರಲು ಸಂವಿಧಾನದ 341(3)ಗೆ ತಿದ್ದುಪಡಿ ತರಬೇಕೆಂದು 2008ರಲ್ಲಿ ನ್ಯಾ. ಉಷಮೇಹರ್ ಅವರು ಹೇಳಿದ್ದರು. ಅದರಂತೆ, ತಿದ್ದುಪಡಿ ಮಸೂದೆಯನ್ನು ಮಂಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಎಸ್ ಮಾರೆಪ್ಪ ವಕೀಲ, ಶಿವರಾಯ ಅಕ್ಕರಕಿ, ಜೆ.ಬಿ. ರಾಜು, ರಾಘವೇಂದ್ರ ಬೋರಡ್ಡಿ, ಹನುಮಂತಪ್ಪ ಮನ್ನಾಪೂರ, ಹೇಮರಾಜ ಅಸ್ಕಿಹಾಳ, ಹನುಮಂತ, ಎ.ರಾಮು, ಹುಲಿಗೆಪ್ಪ, ಚಂದ್ರು ಭಂಡಾರಿ, ಆಂಜನೇಯ, ಪ್ರಸಾದ್ ಭಂಡಾರಿ, ತಾಯಪ್ಪ, ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...