ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮಾಂಸಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭೀಮಣ್ಣ62), ಪತ್ನಿ ಈರಮ್ಮ(58), ಮಗ ಮಲ್ಲೇಶ್(23), ಮಗಳು ಪಾರ್ವತಿ(18) ಮೃತ ದುರ್ದೈವಿಗಳು. ಮತ್ತೊಬ್ಬ ಮಗಳು ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿರವಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಊಟದಲ್ಲಿ ವಿಷ ಬೆರೆಸಿರಬಹುದೆಂದು ಅನುಮಾನ ವ್ಯಕ್ತವಾಗಿದ್ದು, ತನಿಖೆಯಿಂದ ಖಚಿತ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಯುವತಿಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಐವರು ಮಂಗಳಮುಖಿಯರ ಬಂಧನ
ರಾತ್ರಿ ಊಟ ಮಾಡಿ ಅಸ್ವಸ್ಥಗೊಂಡ ಮೂವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





