ರಾಯಚೂರು | ದರ್ವೇಶ್ ಗ್ರೂಪ್ ಕಂಪನಿ‌ಯಿಂದ ವಂಚನೆ; ಅಂಬೇಡ್ಕರ್ ಸೇನೆ ಪ್ರತಿಭಟನೆ 

Date:

ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸಿಕೊಂಡು ಜನರಿಗೆ ಮೋಸ ಮಾಡಿದ ದರ್ವೇಶ್ ಗ್ರೂಪ್ ಕಂಪನಿಯ ಮಾಲೀಕ ಮಹ್ಮದ್ ಹುಸೇನ್ ಸುಜ ಮೇಲೆ ಸೂಕ್ತ ಕಾನೂನು ಕ್ರಮ ಕೈ‌ಗೊಂಡು ಹಣ ಹೂಡಿಕೆ ಮಾಡಿರುವವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸೇನೆ ರಾಯಚೂರು ಜಿಲ್ಲಾ ಘಟಕದಿಂದ ನಗರದ ರಿಮ್ಸ್ ಕಚೇರಿಯ ದರ್ವೇಶ ಗ್ರೂಪ್ ಕಂಪನಿ ಎದುರು ಪ್ರತಿಭಟನೆ ನಡೆಸಲಾಯಿತು.

“ದರ್ವೇಶ್ ಕಂಪೆನಿಯಲ್ಲಿ ಸಾವಿರಾರು ಜನರು ಸಾಲ ಮಾಡಿ, ಆಭರಣಗಳನ್ನು ಮಾರಾಟ ಮಾಡಿ, ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ ಮಾಡಿದ್ದಾರೆ. ಶೇ.12 ರಿಂದ 15 ರಷ್ಟು ಬಡ್ಡಿ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಕೊಂಡು ಕಂಪನಿಯ ಮಾಲೀಕ ಓಡಿ ಹೋಗಿದ್ದಾನೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ದರ್ವೇಶ್ ಗ್ರೂಪ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿದ ಏಜೆಂಟರ್‌ ಕೂಡ ಪರಾರಿಯಾಗಿದ್ದಾರೆ. ಹಣ ಹೂಡಿಕೆ ಮಾಡಿದ ಸಾರ್ವಜನಿಕರು ದೂರು ನೀಡಲು ಹೋದರೆ ಬೇದರಿಕೆ ಹಾಕುವುದರ ಜತೆಗೆ ಹಣ ಕೊಡುವುದಿಲ್ಲವೆಂದು ಹೆದರಿಸುತ್ತಿದ್ದಾರೆ. ಇದರಿಂದಾಗಿ ಹೂಡಿಕೆ ಮಾಡಿದವರು ದೂರು ನೀಡಲು ಹಿಂಜರಿಯುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಡಿವೈಎಸ್‌ಪಿ ಭೇಟಿ ನೀಡಿ, “ದರ್ವೇಶ್ ಗ್ರೂಪ್ ಕಂಪನಿಯಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರು ಸ್ವಯಂ ಪ್ರೇರಿತರಾಗಿ ಮುಂದೆಬಂದು ದೂರು ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯ. ಹಣ ಕಳೆದುಕೊಂಡವರು ದೂರು ನೀಡಿದರೆ ಆರೋಪಿಯನ್ನು ಬಂಧಿ‌ಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಪಟ್ಟಿ, ಮಹೇಶ ಕುಮಾರ, ಈ ಕುಮಾರಸ್ವಾಮಿ, ಕೆ ಸಂತೋಷ, ಚಂದ್ರಶೇಖರ, ಗಂಗಾಧರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...