ರಾಯಚೂರು | ಗಣೇಶ ವಿಸರ್ಜನೆ ವೇಳೆ ಗುಂಪುಗಳ ನಡುವೆ ಗಲಾಟೆ

Date:

ನಗರದ ಗದ್ವಾಲ್ ರಸ್ತೆಯಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು. ವೈಯಕ್ತಿಕ ಕಾರಣಕ್ಕಾಗಿ ಬಿಜೆಪಿ ಮುಖಂಡ ಯು. ನರಸರೆಡ್ಡಿ ಹಾಗೂ ಡ್ಯಾಡಿ ವೀರೇಶ ಅವರ ಗುಂಪುಗಳ ನಡುವೆ ಜಗಳ ಉಂಟಾಗಿ ಮಾರಾಮಾರಿ ನಡೆಯಿತು.

ಘರ್ಷಣೆಯ ವೇಳೆ ಖಾರದಪುಡಿ ಎರಚಿ ಕಲ್ಲು ತೂರಾಟ ನಡೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಬಂದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್‌ಐ ಅವರ ಕಣ್ಣಿಗೆ ದುಷ್ಕರ್ಮಿಗಳು ಖಾರದಪುಡಿ ಎರಚಿದ್ದಾರೆ. ಹೀಗಾಗಿ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದರು ಹಾಗೂ ಡಿಜೆ ಸೆಟ್‌ನ್ನು ಜಪ್ತಿ ಮಾಡಿದರು.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆಯೂ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ಮುಂದುವರಿದಿದ್ದರಿಂದ ಪೊಲೀಸರು ಹೆಚ್ಚುವರಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಾವು

ಈ ಸಂಬಂಧ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಗದ್ವಾಲ್ ರಸ್ತೆಯ ಸುತ್ತಮುತ್ತ ವಾತಾವರಣ ಉದ್ವಿಗ್ನತೆಯಿಂದ ಕೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...