ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದು ಯುವಕ ಸಾವು

Date:

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತಾ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ ನಗರದ ತೀನ್ ಖಂದಿಲ್ ವೃತ್ತದ ಬಳಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ.

ಮೃತ ಯುವಕನನ್ನು ಮಂಗಳವಾರಪೇಟೆಯ ಬಡಾವಣೆಯ ಅಭಿಷೇಕ (24) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿಯಿಂದ ಬೆಳಗಿನ ಜಾವದವರೆಗೆ ಗಣೇಶ ಮೂರ್ತಿಗಳ ಮೆರವಣಿಗೆ ನಡೆದಿದ್ದು ಡಿ.ಜೆ ಸಮೇತ ಮೆರವಣಿಗೆ ತೀನ್ ಖಂದಿಲ್ ವೃತ್ತದ ಮಾರ್ಗವಾಗಿ ಖಾಸ್ ಭಾವಿಗೆ ತೆರಳುವ ವೇಳೆ ಡಿ.ಜೆ ಹಾಡಿಗೆ ನೃತ್ಯ ಮಾಡುತ್ತಾ ಕುಸಿದು ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ವಿಸರ್ಜನೆ ವೇಳೆ ಗುಂಪುಗಳ ನಡುವೆ ಗಲಾಟೆ

ಅಭಿಷೇಕಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಸ್ಥಳೀಯ ಫಾರ್ಚುನ್ ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿಂದ ಹೃದಯ ಸಂಬಂಧಿತ ವಿ.ಜಿ. ಕುಲಕರ್ಣಿ ಆಸ್ಪತ್ರೆ ಹಾಗೂ ನವೋದಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ವೈದ್ಯರು ಪರೀಕ್ಷಿಸಿದ ಬಳಿಕ ಹೃದಯಾಘಾತದಿಂದ ಅಭಿಷೇಕ್ ಮೃತಪಟ್ಟಿದ್ದಾನೆ ಎಂದು ಧೃಡಪಡಿಸಿದ್ದಾರೆ. ಯುವಕನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...