ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

Date:

ಟಾಟಾ ಏಸ್‌ ಗೂಡ್ಸ್‌ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು, ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ದೇವದುರ್ಗ ತಾಲೂಕಿನ ಜಾಡಲದಿನ್ನಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಘಟನೆಯು ಮಂಗಳವಾರ ಬೆಳಕಿಗೆ ಬಂದಿದೆ. ತಾಲೂಕಿನ ಜಾಡಲದಿನ್ನಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಕೂಲಿಕಾರರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಜಾಡಲದಿನ್ನಿ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ನಾಲೆಯ ಮುಖ್ಯ ಕಾಲುವೆಗೆ ಇಳಿದಿದೆ.

ಕೆನಾಲ್ ಬಳಿಯ ಕಚ್ಚಾ ರಸ್ತೆಯಿಂದ ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಜಾರಿದೆ. ಕಾಲುವೆಗೆ ವಾಹನ ಬಿದ್ದ ಬಳಿಕ, ಚಾಲಕ ಗಾಡಿ ಆಫ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಡು ನೀರಿನಲ್ಲೇ ನಿಂತ ಟಾಟಾ ಏಸ್‌ನಲ್ಲಿದ್ದ ಮಹಿಳೆಯರು, ಗಾಬರಿಯಾಗಿ ಚೀರಾಡಿದ್ದಾರೆ. ಮಹಿಳೆಯರ ಶಬ್ದ ಕೇಳಿ ರಸ್ತೆಯಿಂದ ಹೋಗುತ್ತಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಕೂಲಿ ಕಾರ್ಮಿಕ ಮಹಿಳೆಯರನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಹಿಳೆಯರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯರು ಸಿರವಾರ ತಾಲ್ಲೂಕಿನ ಜಂಬಲದಿನ್ನಿ ಗ್ರಾಮಸ್ಥರು ಎಂದು ಹೇಳಲಾಗಿದೆ.

ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಈ ಬಗ್ಗೆ ದೇವದುರ್ಗ ಪೊಲೀಸರಿಗೆ ಕೇಳಿದರೆ ಮಾಹಿತಿ ಇಲ್ಲ ಎಂದು ಹೇಳಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ ಮಕ್ಕಳು ನೀರುಪಾಲು: ಮೂವರ ಪೈಕಿ ಇಬ್ಬರ ಶವ ಪತ್ತೆ

ಘಟನೆಯ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಚಾಲಕನ ಹಾಗೂ ಸ್ಥಳೀಯ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಹತ್ತಿ‌ಬಿಡಿಸಲು ಕೃಷಿ ಕಾರ್ಮಿಕರನ್ನು ದನಕರುಗಳಂತೆ ಸಾಗಿಸುತ್ತಿದ್ದು, ಪೊಲೀಸ್ ಇಲಾಖೆ ‌ಮೌನ ವಹಿಸಿದೆ. ಇನ್ನಾದರೂ, ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು, ಕೂಲಿ ಕಾರ್ಮಿಕರನ್ನು ಸಾಗಿಸುವುದನ್ನು ತಡೆಗಟ್ಟಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...