ರಾಯಚೂರು | ದೇವರ ಹೆಸರಲ್ಲಿ ಸರ್ಕಾರಿ ಶಾಲಾ‌ ಜಾಗ ಒತ್ತುವರಿ: ಮಧ್ಯರಾತ್ರಿ ತೆರವುಗೊಳಿಸಿದ ಪೊಲೀಸರು

Date:

ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ಕಟ್ಟಡವನ್ನು ಮಂಗಳವಾರ ಮಧ್ಯರಾತ್ರಿ ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದಾರೆ.

ನಗರಸಭೆಯವರು ಮೂರು ಕ್ರೇನ್ ಬಳಸಿ ಇಟ್ಟಿಗೆಯಿಂದ ನಿರ್ಮಿಸಿದ ಶೆಡ್ ಅನ್ನೂ ತೆರವು ಮಾಡಿದ್ದು, ಶಾಲಾ‌ ಜಾಗದಲ್ಲಿ ಇಟ್ಟಿದ್ದ ನಾಗ ದೇವರ ಮೂರ್ತಿಗಳನ್ನು ಕಾರಿನಲ್ಲಿ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿದ್ದು, ಸ್ಥಳೀಯ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಲು ಚಿಂತನೆ ನಡೆಸಿದ್ದಾರೆ.

ಚಂದ್ರಬಂಡಾ ರಸ್ತೆಯ ಎಲ್‌ಬಿಎಸ್ ನಗರದ ಸಂತೋಷ್‌ ಬಡಾವಣೆಯ ಸರ್ವೆ ನಂ. 784/1 ರಲ್ಲಿ ವಸತಿ ಬಡಾವಣೆಗೆ ನಾಗರಿಕ ಸೌಲಭ್ಯದ ಕೋಟಾದಡಿ ಎಲ್ ಬಿ ಎಸ್ ನಗರದ ಸರ್ಕಾರಿ ಪ್ರೌಢ ಶಾಲೆಗೆ (ಕನ್ನಡ ಮಾಧ್ಯಮ) ಶಾಲಾ ಕಟ್ಟಡಕ್ಕಾಗಿ ಮೀಸಲಿಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000037339

1017 ಚದರ ಮೀಟರ್‌ಗಿಂತ ಅಧಿಕ ಖಾಲಿ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ವ್ಯಕ್ತಿಗಳು ಸರ್ಕಾರಿ ಜಾಗದಲ್ಲಿ ಮನೆ ಕಟ್ಟುವ ಸಂದರ್ಭದಲ್ಲಿ ಅಕ್ರಮವಾಗಿ ಟಿನ್ ಶೆಡ್‌ ನಿರ್ಮಾಣ ಮಾಡಿದ್ದಾರೆ. ಅದಕ್ಕೆ ದೇವಸ್ಥಾನ ಮತ್ತು ದೇವರ ಸ್ವರೂಪವನ್ನು ನೀಡಿ ದೇವರ ಹೆಸರಿನಲ್ಲಿ ಸರ್ಕಾರಿ ಜಾಗವನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು, ರಾಯಚೂರು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು.

ಮನವಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿಗಳು, 15 -20 ದಿನದಲ್ಲಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ನೀಡಿದ್ದ ಭರವಸೆಯಂತೆಯೇ ಮಂಗಳವಾರ ಮಧ್ಯರಾತ್ರಿ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ಕಾರ್ಯ ನಿರ್ವಹಿಸಿ, ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

1000037345

ಹೋರಾಟಗಾರರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ, ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳ ಮತ್ತು ಸಚಿವರ ಗಮನಕ್ಕೆ ತಂದಿದ್ದರು.

ಇದನ್ನು ಓದಿದ್ದೀರಾ? ಬೆಳಗಾವಿ | ಕಾರು ಅಡ್ಡಗಟ್ಟಿ ಹಣ ದರೋಡೆ ಪ್ರಕರಣಕ್ಕೆ ತಿರುವು​: ದೂರುದಾರ ಸೇರಿ ನಾಲ್ವರು ವಶಕ್ಕೆ!

ಯಾವುದೇ ಸಮಸ್ಯೆಯಾಗದಂತೆ ತೆರವುಗೊಳಿಸಿದ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...