ರಾಯಚೂರು | ಮನರೇಗಾ ಹೆಸರು ಬದಲಾವಣೆಗೆ ವಿರೋಧಿಸಿ ಡಿ.22 ರಂದು ಸಂಸದರ ಕಚೇರಿ ಮುಂದೆ ಗ್ರಾಕೂಸ್ ಪ್ರತಿಭಟನೆ

Date:

ಮಹಾತ್ಮಗಾಂಧಿ ಉದ್ಯೋಗ ಖಾತ್ರಿಯ ಯೋಜನೆಯಡಿಯನ್ನು ಜಿ ರಾಮ ಜೀ ಯೋಜನೆ ಎಂದು ಬದಲಾವಣೆ ಮಾಡುವದರೊಂದಿಗೆ ಹೊಸ ಮಸೂದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಕ್ರಮವನ್ನು ವಿರೋಧಿಸಿ ಗ್ರಾಮೀಣ ಕೂಲಿಕಾರರ ಸಂಘದಿಂದ ಡಿ.22 ರಂದು ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಸಮಿತಿ ಸಂಚಾಲಕ ಗುರುರಾಜ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಷ್ಕರಿಸಿ ನೂರು ದಿನ ಬದಲು 125 ದಿನಗಳಿಗೆ ಹೆಚ್ಚಿಸಿರುವ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಗೆ ಅನುದಾನ ಕಡಿತಗೊಳಸಿದೆ. ಈ ಮೊದಲು ಕೇಂದ್ರದಿಂದ 90 ಪ್ರತಿಶತ ಹಾಗೂ ರಾಜ್ಯಗಳಿಂದ 10 ಪ್ರತಿಶತ ಅನುದಾನದಲ್ಲಿ ಜಾರಿಗೊಳಿಸುತ್ತಿದ್ದ ಯೋಜನೆಯನ್ನು ಈಗ 60;40 ಆನುಪಾತದಲ್ಲಿ ಜಾರಿಗೆ ಮುಂದಾಗಿದೆ ಎಂದು ಹೇಳಿದರು.

ನೂರು ದಿನ ಕೆಲಸ ನಿಗದಿಪಡಿಸಿದ್ದಾಗಲೇ 60 ದಿನ ಕೆಲಸ ನೀಡಲು ಆಗಿಲ್ಲ. ಅನುದಾನವೇ ಕಡಿತಗೊಳಿಸಿದ್ದರಿಂದ ಉದ್ಯೋಗ ಖಾತ್ರಿಯೇ ಅರ್ಥ ಕಳೆದುಕೊಳ್ಳುವಂತಾಗಲಿದೆ. ಉದ್ಯೋಗ ಖಾತ್ರಿ ಕಾಯ್ದೆಯನ್ನು ತಿದ್ದುಪಡಿಯಿಂದ ಬೇಡಿಕೆ ಆಧಾರದ ಬದಲು ಪೂರೈಕೆ ಆಧಾರದ ಮೇಲೆ ಜಾರಿಗೊಳಿಸಿ ಕಾರ್ಮಿಕ ಹಕ್ಕು ಕಸಿಯುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಅರೋಪಿಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕೇಂದ್ರಿಕರಣ ವ್ಯವಸ್ಥೆಯನ್ನು ಗಾಳಿಗೆ ತೂರಿ ಗ್ರಾಮಸಭೆ ಅಧಿಕಾರವೂ ಕಿತ್ತಿಕೊಂಡಿದೆ. ಮಹಿಳೆಯರು, ಕೂಲಿ ಕಾರ್ಮಿಕರು ನಂಬಿಕೊಂಡಿದ್ದ ಉದ್ಯೋಗಖಾತ್ರಿ ಕಳೆದುಕೊಂಡಂತಾಗಿದೆ. ಕೂಡಲೇ ಮಸೂದೆ ರದ್ದಿಗೆ ಆಗ್ರಹಿಸಿ ರಾಜ್ಯದಾಧ್ಯಂತ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿರೋಧಿಸುವದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ಗಬ್ಬೂರು, ಮಾರೆಮ್ಮ, ರೂಪಾ, ಹುಚ್ಚಮ್ಮ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...