ರಾಯಚೂರು | ಗ್ಯಾರಂಟಿ ವೈಫಲ್ಯ ಆರೋಪ; ಜೆಡಿಎಸ್ ಪ್ರತಿಭಟನೆ

Date:

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜೆಡಿಎಸ್‌ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ, “ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಕಳೆದ ಮೂರು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ವರ್ಗಾಯಿಸದೆ ಆಶ್ವಾಸನೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಅದಲ್ಲದೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಸಾಲಗಾರರ, ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ” ಎಂದು ಆರೋಪಿಸಿದರು.

“ಗ್ಯಾರಂಟಿಗಳ ಹಣವನ್ನು ರಾಜ್ಯ ಸರ್ಕಾರ ಚುನಾವಣೆ, ಉಪ ಚುನಾವಣೆಗಳ ಸಮಯಕ್ಕೆ ಸರಿಯಾಗಿ ಹೊಂದಿಸಿಕೊಂಡು ವರ್ಗಾವಣೆ ಮಾಡುತ್ತಿದೆ. ಕಳೆದ ಲೋಕಸಭೆಯ ಚುನಾವಣೆ ಮುನ್ನ ಐದಾರು ತಿಂಗಳ ಬಾಕಿಯನ್ನು ಒಮ್ಮೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿತ್ತು, ಮತ್ತು ಅದೇ ರೀತಿ ಈ ಬಾರಿಯು ಕೂಡಾ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ವೇಳೆ ಈ ಹಣವನ್ನು ವರ್ಗಾಯಿಸಲು ಮುಂದಾಗಿದೆ.
ರಾಜ್ಯದ ಮಹಿಳೆಯರು ಮಾತಿಗೆ ತಪ್ಪಿದ ರಾಜ್ಯ ಸರ್ಕಾರವೆಂದು ಹಿಡಿಶಾಪ ಹಾಕುತ್ತಿದ್ದಾರೆ. ಈ ಯೋಜನೆ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿ ಇರುವ ಮಂತ್ರಿಯೊಬ್ಬರು ಮಾಧ್ಯಮಗಳಲ್ಲಿ ಪ್ರತಿ ತಿಂಗಳು ಕೊಡಲು ಇದೇನು ವೇತನವಲ್ಲವೆಂದು ಉಡಾಫೆ ಹೇಳಿಕೆಯನ್ನು ಸಹ ನೀಡಿರುತ್ತಾರೆ” ಎಂದು ಆಪಾದಿಸಿದರು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, “ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರ ಕುಟುಂಬಗಳ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದು, ಇದರಲ್ಲಿ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದು ರಾಜ್ಯ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಹೆಚ್ಚುವರಿ 5 ಕೆ.ಜಿ. ಅಕ್ಕಿಯನ್ನು ನೀಡಬೇಕಿತ್ತು. ಇದರ ಬದಲಾಗಿ ಪ್ರತಿ ಕೆಜಿ ಅಕ್ಕಿಗೆ ರೂ.34 ರೂ ಗಳಂತೆ ಒಟ್ಟು 690 ರೂ. ಗಳನ್ನು ಕುಟುಂಬದ ಖಾತೆಗೆ ಪ್ರತಿ ತಿಂಗಳು ವರ್ಗಾವಣೆ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಕಳೆದ 5 ತಿಂಗಳಿನಿಂದ ಬಿಡುಗಡೆ ಮಾಡಬೇಕಾಗಿರುವ ರೂ. 5786 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿರುವುದಿಲ್ಲ. ರಾಜ್ಯಸರ್ಕಾರದ ಈ ವೈಫಲ್ಯದಿಂದ ಹಸಿದ ಬಡ ಕುಟುಂಬಗಳು ಕಂಗಾಲಾಗಿದ್ದಾರೆ” ಎಂದರು.

ಕಾಂಗ್ರೆಸ್ ಸರ್ಕಾರ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಂತೆ ಮತ್ತು ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನಾಲ್ಕೈದು ತಿಂಗಳಿನಿಂದ ಬಿಡುಗಡೆಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಮೈಕ್ರೋಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಯಿಂದ ನೊಂದ ಕುಟುಂಬಗಳಿಗೆ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಕನ್ನಡ ಪ್ರಜ್ಞೆ ಕನ್ನಡಿಗರೆಲ್ಲರಲ್ಲೂ ಮೂಡಬೇಕು: ಸಂಸದ ಕುಮಾರ ನಾಯಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಎನ್ ಶಿವಶಂಕರ ವಕೀಲ, ಮುಖಂಡರಾದ ಬುಡ್ಡನಗೌಡ, ಸಣ್ಣ ನರಸಿಂಹ ನಾಯಕ, ರಾಮಕೃಷ್ಣ, ತಿಮ್ಮಾರೆಡ್ಡಿ, ಲಕ್ಷ್ಮೀಪತಿ ಗಾಣದಾಳ, ನರಸಪ್ಪ ಆಶಾಪೂರು ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...