ರಾಯಚೂರು | ಪಕ್ಷ ತೊರೆಯುವವರ ಸಮಾಧಾನಕ್ಕೆ ಹೆಚ್‌ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ: ಸಣ್ಣ ನೀರಾವರಿ ಸಚಿವ

Date:

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರ ಸಮಾಧಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರ‍್ಯಾಜ್ಯ ಸರ್ಕಾರ ಪತನಗೊಳ್ಳಲಿದೆಯೆಂದು ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಲೇವಡಿ ಮಾಡಿದರು.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೆಚ್.ಡಿ ಕುಮಾರಸ್ವಾಮಿ ಹೇಳಿದಂತೆ ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ. ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದೆ. ರಾಜ್ಯದಲ್ಲಿ ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಸ್ಮಮಿಶ್ರ ಸರ್ಕಾರವಿದ್ದಾಗ ಉಳಿಸಿಕೊಳ್ಳಲಾಗಲಿಲ್ಲ. ಕುಮಾರಸ್ವಾಮಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ಶಕ್ತಿ ಇದ್ದಿದ್ದರೆ ಅವರು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಬಹುದಿತ್ತು. ಅದು ಸಾಧ್ಯವಾಗಲಿಲ್ಲ” ಎಂದರು.

“ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದ್ದು, ಕಾರ್ಯಕರ್ತರಿಗೆ ಧೈರ್ಯ ಹೇಳಲು ಅರ್ಥವಿಲ್ಲದ ಮಾತುಗಳನ್ನಾಡುತ್ತಿದ್ದಾರೆ. ಪ್ರತಿಯೊಂದರಲ್ಲಿ ಹಿಟ್ ಅಂಡ್ ರನ್ ಧೋರಣೆ ಅನುಸರಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕ ಶಿವಶಂಕರಪ್ಪ ನಡುವೆ ಯಾವುದೇ ಅಸಮಧಾನವಿಲ್ಲ. ಅವರ ಮಗ ಮಲ್ಲಿಕಾರ್ಜುನ ಮಂತ್ರಿಯಾಗಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಪ್ರಾಧಾನ್ಯತೆ ನೀಡಿದೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಶಂಕರಪ್ಪ ನಮ್ಮೆಲ್ಲರ ಹಿರಿಯ ನಾಯಕರು. ಆಗಾಗ ಸಲಹೆ ಸೂಚನೆಗಳನ್ನು ನೀಡುತ್ತಾರೆ. ಪಕ್ಷನಿಷ್ಠೆಗೆ ಅವರು ಮಾದರಿಯಾಗಿದ್ದಾರೆ. ಶಿವಶಂಕರಪ್ಪ ಅವರಿಗೆ ಯಾರೋ ಅಧಿಕಾರಿಗಳು ಹೇಳಿರುತ್ತಾರೇ, ಹೀಗಾಗಿ ಸಹಜವಾಗಿ ಮಾತನಾಡಿರುತ್ತಾರೆ. ಆದರೇ ಅದನ್ನೇ ದೊಡ್ಡದು ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

“ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೇರೆ ಕೆಲಸಕ್ಕಾಗಿ ನನ್ನ ಹತ್ತಿರ ಬಂದಿದ್ದರು. ಅಲ್ಲಿರುವ ಪರಿಸ್ಥಿತಿ ಸರಿಯಿಲ್ಲವೆಂದು ಅನೇಕ ನಾಯಕರು ಹೇಳುತ್ತಿದ್ದು, ಬಿಜೆಪಿ, ಜೆಡಿಎಸ್ ತೊರೆದು ಅನೇಕ ನಾಯಕರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸೇರಲಿದ್ದಾರೆ” ಎಂದರು.

ಸಿಟಿಜನ್‌ ಜರ್ನಲಿಸ್ಟ್: ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...