ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Date:

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಹಿಳೆಯರ ಕುರಿತಾಗಿ ಅವಮಾನಿಸಿ ಮಾತನಾಡಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿಯವರು ಗ್ಯಾರಂಟಿ ಯೋಜನೆಗಳ ಜಾರಿಯನ್ನು ಸಹಿಸದೇ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದು ಕೂಡಲೇ ಮಹಿಳೆಯರ ಕ್ಷಮೆಯಾಚಿಸಬೇಕು ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಮೈತ್ರಿ ಪಕ್ಷದ ನಾಯಕರೊಬ್ಬರ ಹೇಳಿಕೆಯನ್ನು ಖಂಡಿಸಬೇಕೆಂದರು.

ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಸಬಲೀಕರಣಗೊಳಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಗೌರವಿಸುತ್ತಲೇ ಬಂದಿದೆ. ಆದರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಅವಮಾನ ಮಾಡಿದ್ದಾರೆ. ಕೂಡಲೇ ಕ್ಷಮೆಕೋರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಮಾತನಾಡಿ ಗ್ಯಾರಂಟಿ ಯೋಜನೆಗಳಿಗೆ ಜನತೆ ನೀಡುತ್ತಿರುವ ಬೆಂಬಲ ಸಹಿಸಿಕೊಳ್ಳಲಾಗದೆ ಎಚ್.ಡಿ. ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿದ್ದಾರೆ. ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದೇ ಹೋದಲ್ಲಿ ಮಹಿಳೆಯರೇ ಬುದ್ದಿ ಕಲಿಸಲಿದ್ದಾರೆ ಎಂದರು.

ಕೆಪಿಸಿಸಿ ಮಹಿಳಾ ನಾಯಕಿ ಶಶಿಕಲಾ ಭೀಮರಾಯ ಮಾತನಾಡಿ ಮಹಿಳೆಯರು ದಾರಿತಪ್ಪುವ ಕುರಿತು ಮಾತನಾಡಿರುವುದು ಖಂಡನೀಯ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದೇ ಹೋದರೆ ಮಹಿಳೆಯರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಬ್ಯರ್ಥಿಗಳನ್ನು ತಿರಸ್ಕರಿಸುತ್ತಾರೆ ಎಂದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ.ಶಾಂತಪ್ಪ, ಜಿ.ಬಸವರಾಜರೆಡ್ಡಿ, ಜಯಣ್ಣ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿ.ಸುರೇಶ, ಈಶಪ್ಪ, ರುದ್ರಪ್ಪ ಅಂಗಡಿ, ಯೂಸೂಫ್ ಖಾನ್, ಭಾರತಿ ವೆಂಕಣ್ಣ, ರಾಣ  ರಿಚರ್ಡ್ಸ, ಮಾಲಾ ಭಜಂತ್ರಿ, ಮಂಜುಳಾ, ರಜಿಯಾ ಪಾಟೀಲ್, ಪ್ರೇಮಲತಾ ಸೇರಿದಂತೆ ಅನೇಕ ಮುಖಂಡರುಗಳು, ಕಾರ್ಯಕರ್ತರು ಭಾಗಿಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...