ರಾಯಚೂರು | ಕಳಪೆ ಕಾಮಗಾರಿ ; ಲೈಸನ್ಸ್ ರದ್ದತಿಗೆ ಆಗ್ರಹ

Date:

ಕರ್ನಾಟಕ ರಾಜ್ಯ ಸರಕಾರದ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಯೋಜನೆಯಡಿ ಯಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಮಾಡಿದ್ದು ಪರಿಶೀಲನೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸೇನೆ ವತಿಯಿಂದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಹದೆಗಟ್ಟಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ.34 ಕೋಟಿ ರೂ.ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲು 1 ಕಿ.ಮೀ ಗೆ 7 ಕೋಟಿ ರೂಪಾಯಿ ಅನುದಾನವನ್ನು ನೀಡಿ ಉನ್ನತ ಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಗುತ್ತೇದಾರರಿಗೆ ಆದೇಶಿಸಿ ಸಂಪೂರ್ಣವಾಗಿ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಗೆ ನೀಡಿದೆ. ಕಂಪನಿಯು ಕಳಪೆ ಕಾಮಗಾರಿ ಮಾಡುತ್ತಿದ್ದು ,ಅಧಿಕಾರಿಗಳೊಂದಿಗೆ ಶಾಮೀಲಾಗಿ ಭ್ರಷ್ಟಚಾರವೆಸಗಿದೆ. ಕಳಪೆ ಕಾಮಗಾರಿ ಕಾನೂನು ಬಾಹೀರವಾಗಿ ಸರಕಾರದ ಆದೇಶಗಳನ್ನು ಗಾಳಿಗೆ ತೂರಿದೆ ಎಂದು ದೂರಿದರು.

ಈ ಗುತ್ತಿಗೆದಾರನ ಅವೈಜ್ಞಾನಿಕ ಕಾಮಗಾರಿಯ ರಾಷ್ಟ್ರೀಯ ಹೆದ್ದಾರಿ ಪವರಗ್ರೀಡ್ ಮುಂದುಗಡೆ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.ಕೂಡಲೇ ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಯ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ

ಈ ಸಂದರ್ಭದಲ್ಲಿ ರಾಜ್ಯ ಸಂಘಟನೆ ಕಾರ್ಯದರ್ಶಿ ಜಾವಿದ್ ಖಾನ್, ಜಿಲ್ಲಾಧ್ಯಕ್ಷ ಮಾರುತಿ ಛಲುವಾದಿ ಚಿಕ್ಕಸೂಗುರು, ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...