ರಾಯಚೂರು | ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ; ಅಭಿವೃದ್ಧಿ ಮರೀಚಿಕೆ

Date:

ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಆದರ್ಶ ಗ್ರಾಮ ಮಾಡಬೇಕೆಂದು ಆಶಿಸಿ ಸಂಸತ್ ಸದಸ್ಯರು ತಮ್ಮ ಆಯ್ಕೆಯ ಗ್ರಾಮ ಪಂಚಾಯಿತಿವೊಂದನ್ನು ದತ್ತು ಪಡೆದುಕೊಂಡು ಸಂಪೂರ್ಣವಾಗಿ ಅಭಿವೃದ್ಧಿ ಮಾಡಬೇಕೆಂಬುದು ಸರ್ಕಾರದ ನಿಯಮ. ಆದರೆ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ, ಅಭಿವೃದ್ಧಿಯಲ್ಲಿ ಶೂನ್ಯ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.

“ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಪಂಚಾಯಿತಿ ವ್ಯಾಪ್ತಿಗೆ ಬರುವ ಹೊನ್ನಟಗಿ ಗ್ರಾಮ ಕೇವಲ ಸರ್ಕಾರದ ಪಟ್ಟಿಯಲ್ಲಿ ಮಾತ್ರ ಆದರ್ಶ ಗ್ರಾಮ.‌ ಆದರೆ ಸಂಪೂರ್ಣ ಮೂಲಸೌಕರ್ಯಗಳಿಂದ ವಂಚಿತಗೊಂಡಿದ್ದು, ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಹೆಸರಿಗೆ ಮಾತ್ರ ಆದರ್ಶ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ನಿವಾಸಿ ಶಾಂತಕುಮಾರ ಹೊನ್ನಟಗಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹೇಮನಾಳ ಪಂಚಾಯಿತಿ ವ್ಯಾಪ್ತಿಗೆ ಬರುವ ಹೊನ್ನಟಗಿ ಗ್ರಾಮ ಸರ್ಕಾರದ ಪಟ್ಟಿಯಲ್ಲಿ 2019/20ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮವೆಂದು ಆಯ್ಕೆಯಾದರೂ ಸಹಿತ ಪ್ರಸ್ತುತದವರೆಗೆ ರಸ್ತೆ, ಚರಂಡಿ, ಶುದ್ದ ಕುಡಿಯುವ ನೀರು, ಮಹಿಳಾ ಶೌಚಾಲಯ, ಅಂಗನವಾಡಿ, ಶಾಲೆ, ಪ್ರಾಥಮಿಕ ಶಾಲೆ, ಜನಸಾಮಾನ್ಯರು, ಮಕ್ಕಳು ಬಹಳ ಉತ್ತಮವಾದ ವಾತಾವರಣದಲ್ಲಿ ಜೀವಿಸಲು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಆದರ್ಶ ಗ್ರಾಮವಾಗಬೇಕಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಸ್ತವ್ಯಸ್ತಕ್ಕೆ ಕಾರಣವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮದಲ್ಲಿರುವ ಅನೈರ್ಮಲ್ಯವನ್ನು ಶುಚಿಗೊಳಿಸಿಕೊಡುವಂತೆ ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೂ ಮನವಿ ನೀಡಿದ್ದೇವೆ” ಎಂದು ಹೇಳಿದರು.

ಮನವಿ 6

“ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ವಾಸ್ತವದಲ್ಲಿ ಸಿಸಿ ರಸ್ತೆ ಇಲ್ಲದೆ ಜನ ತಿರುಗಾಡಲು ಕಷ್ಟಪಡುತ್ತಿದ್ದಾರೆ. ಚರಂಡಿ ನೀರು ಊರ ಹೊರಗೆ ಹೋಗಲು ಸರಿಯಾಗಿ ಚರಂಡಿ ಇಲ್ಲದ ಕಾರಣ ಈ ಗ್ರಾಮದ ಅಂಗನವಾಡಿ ಕೇಂದ್ರದ ಮುಂದೆ ಕೆರೆಯಾಗಿ ಮಾರ್ಪಟ್ಟು ಅಲ್ಲಿ ಮಕ್ಕಳು ರೋಗ ರುಜುನಗಳಿಗೆ ತುತಾಗುತ್ತಿದ್ದಾರೆ. ಮಲೇರಿಯಾ, ಡೆಂಘೀ, ಚಿಕುನ್ ಗುನ್ಯಾ, ಕಾಲರಾ ಸೇರಿದಂತೆ ಇನ್ನು ಮುಂತಾದ ಅನೇಕ ಸಮಸ್ಯೆಗಳಿವೆ” ಎಂದರು.

“ಆದರ್ಶ ಗ್ರಾಮವೆಂದಲ್ಲಿ ಸರಿಯಾಗಿ ಮೂಲಸೌಕರ್ಯಗಳೂ ಇಲ್ಲದೆ ನಾವು ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದೇವೆ. ಸರ್ಕಾರ ಬರೀ ಹೆಸರಿಗೆ ಮಾತ್ರ‌ ಆದರ್ಶ ಗ್ರಾಮವೆಂದು ಘೋಷಣೆ ಮಾಡಿರುವುದಕ್ಕೂ ಗ್ರಾಮ ಇರುವ ಸ್ಥಿತಿಗೂ ಎದ್ದು ಎದ್ದು ಕಾಣಿಸುತ್ತಿದೆ” ಎಂದು ಹೇಳಿದರು.

IMG 20240928 WA0002

“ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಸಾಮಾಜಿಕ ಅಭಿವೃದ್ಧಿಯನ್ನೂ ಸಾಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆದರೆ ಈ ಗ್ರಾಮದಲ್ಲಿ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದೆ. ಆದರ್ಶ ಗ್ರಾಮಗಳು ಸ್ಥಳೀಯವಾಗಿ ಅಭಿವೃದ್ಧಿ ಹೊಂದಿ ಆದರ್ಶ ಶಾಲೆಗಳಾಗಿ ಮುಂದುವರೆದು ಉಳಿದ ಗ್ರಾಮ ಪಂಚಾಯಿತಿಗಳಿಗೆ ಸ್ಫೂರ್ತಿಯಾಗಬೇಕಾಗಿದೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ ಹಗರಣ | ಕೋರ್ಟ್‌ ಸೂಚನೆಯ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

“ಸಂಸದರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾದರಿ ಪಂಚಾಯಿತಿಯನ್ನಾಗಿ ಮಾಡಿ ಸುತ್ತಮುತ್ತ ಉಳಿದ ಗ್ರಾಮ ಪಂಚಾಯಿತಿಗಳಿಗೂ ಸ್ಪೂರ್ತಿಯಾಗಬೇಕು” ಎಂದರು.

ಈ ಸಂದರ್ಭದಲ್ಲಿ ಸೂಗಪ್ಪ ಗೌಡ, ಬಸನ ಗೌಡ, ಪರ್ತಪ್ಪ ರೆಡ್ಡಿ, ಭೀಮನಗೌಡ ಸೇರಿದಂತೆ ಇತರರು ಇದ್ದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...