ರಾಯಚೂರು | ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

Date:

ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ, ಎಐಯುಟಿಯುಸಿ ನೇತೃತ್ವದಲ್ಲಿ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡುಗೆ ಸಿಬ್ಬಂದಿಗಳಿಗೆ 3 ತಿಂಗಳ ಬಾಕಿ ವೇತನ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಮಿಕರಿಗೆ 3 ತಿಂಗಳ ಬಾಕಿ ವೇತನ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಯವರಿಗೆ ಬಾಕಿಯಿರುವ 1 ತಿಂಗಳ ವೇತನವನ್ನು ಕೂಡಲೇ ಪಾವತಿ ಮಾಡಬೇಕು” ಎಂದು ಆಗ್ರಹಿಸಿದರು.

“ಎಲ್ಲ ಇಲಾಖೆಗಳ ಕಾರ್ಮಿಕರಿಗೆ ಇಎಸ್‌ಐ ಕಾರ್ಡ್, ಆದೇಶ ಪ್ರತಿ, ಗುರುತಿನ ಚೀಟಿ, ಸಮವಸ್ತ್ರಗಳನ್ನು ವಿತರಿಸಬೇಕು. ಎಲ್ಲ ಇಲಾಖೆಯ ಕಾರ್ಮಿಕರಿಗೆ ವೇತನ ಪಾವತಿ ಮಾಡಿರುವ ವೇತನ ಚೀಟಿ ಪ್ರತಿ ತಿಂಗಳು ನೀಡಬೇಕು. ಎಲ್ಲ ಇಲಾಖೆಯ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಯನ್ವಯ ವಾರಕ್ಕೆ ಒಂದು ರಜೆ ನೀಡಬೇಕು. ರಜೆ ಪಡೆಯದ ಕಾರ್ಮಿಕರಿಗೆ ಆ ದಿನದ ದುಪ್ಪಟ್ಟು ಕೂಲಿ ಪಾವತಿ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಕ್ಕೆ 8 ಗಂಟೆ ಅವಧಿ ದುಡಿಮೆ ಹಾಗು ದಿನದ 8 ಗಂಟೆ ನಂತರದ ಹೆಚ್ಚುವರಿ ದುಡಿಮೆಗೆ ಹೆಚ್ಚುವರಿ ವೇತನ(ಓಟಿ) ಪಾವತಿ ಮಾಡಬೇಕು.ಹೊರಗುತ್ತಿಗೆ ಖಾಸಗಿ ಏಜೆನ್ಸಿಗಳ ಶೋಷಣೆ ತಪ್ಪಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ 6ರಿಂದ ರಾತ್ರಿ 8ರ ವರೆಗೆ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿರುವುದನ್ನು ಹಿಂಪಡೆಯಬೇಕು. ದಿನದ 8 ಗಂಟೆ ನಂತರದ ಹೆಚ್ಚುವರಿ ದುಡಿಮೆಗೆ ಹೆಚ್ಚುವರಿ ವೇತನ(ಓಟಿ) ಪಾವತಿ ಮಾಡಬೇಕು” ಎಂದು ಒತ್ತಾಯಿಸಿದರು.

“ಕಾರ್ಮಿಕ ಕಾಯ್ದೆಯನ್ವಯ ಸರ್ಕಾರ ಘೋಷಿತ ಸಾರ್ವತ್ರಿಕ ರಜೆ, ಸಾರ್ವಜನಿಕ ಹಬ್ಬದ ದಿನದಂದು ಸೇವೆ ಸಲ್ಲಿಸುವ ಕಾರ್ಮಿಕರಿಗೆ ಆ ದಿನದ ದ್ವಿಗುಣ ದರದಲ್ಲಿ ವೇತನ ಪಾವತಿ ಮಾಡಬೇಕು. ಕಾರ್ಮಿಕರ ವೇತನದಲ್ಲಿ ಕಟಾವು ಮಾಡಲಾದ ಇಪಿಎಫ್ ಮತ್ತು ಇಎಸ್‌ಐ ವಂತಿಗೆ ಮೊತ್ತವನ್ನು ಕಾರ್ಮಿಕರ ಇಪಿಎಫ್ ಮತ್ತು ಇಎಸ್‌ಐ ಖಾತೆಗಳಿಗೆ ಜಮಾ ಮಾಡಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಬೊಳಮಾನದೊಡ್ಡಿಯಲ್ಲಿ ಆರೋಗ್ಯ ರಜೆಯ ಮೇಲೆ ತೆರಳಿದ ಅಡುಗೆಯವರಾದ ನರಸಮ್ಮ ಎಂಬುವವರಿಗೆ ಅವರ ಮೊದಲ ಸ್ಥಳದಲ್ಲಿಯೇ ಸೇವೆಗೆ ನಿಯೋಜಿಸಿ ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ; ರಿಕ್ಟರ್‌ ಮಾಪಕದಲ್ಲಿ 2.3 ತೀವ್ರತೆ ದಾಖಲು

“ಇಲಾಖೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಪ್ರತಿ ತಿಂಗಳ 5ರ ಒಳಗಾಗಿ ಕಾರ್ಮಿಕರಿಗೆ ವೇತನ ಪಾವತಿ ಮಾಡಬೇಕು. ಎಲ್ಲ ಇಲಾಖೆಗಳಲ್ಲಿ ಮೊದಲು ಸೇವೆ ಸಲ್ಲಿಸಿದ ಕಾರ್ಮಿಕರನ್ನೇ ಸೇವಾ ಹಿರತನ ಆಧರಿಸಿ ಕೆಲಸಕ್ಕೆ ನಿಯೋಜಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾದ್ಯಕ್ಷ ಮಹೇಶ ಸಿ, ಕಾರ್ಯದರ್ಶಿ ಗಾಯತ್ರಿ ಎಂ, ಅಣ್ಣಪ್ಪ, ಬಸವರಾಜ, ಹನುಮರೆಡ್ಡಿ, ಮಹೇಶ್ವರಿ, ಅಂಬಿಕಾ, ಶಶಿಕುಮಾರ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...