ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

Date:

ರಾಯಚೂರು ನಗರದ ಯರಮರಸ್ ಹೊರವಲಯದಲ್ಲಿರುವ ಮೇಘಾ ರೆಸಿಡೆನ್ಸಿ ಹೋಟೆಲ್‍ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆ ಮೇಲೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಆರು ಮಹಿಳೆಯರನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವೇಶ್ಯಾವಾಟಿಕೆ ಕಿಂಗ್ ಪಿನ್ ಶಂಕರ್, ಕಾರು ಚಾಲಕ ಮಲ್ಲೇಶ ನಾಯಕ, ಹೋಟೆಲ್ ವ್ಯವಸ್ಥಾಪಕ ಶಿವಕುಮಾರ್, ರೂಮ್ ಬಾಯ್ ದುರುಗೇಶ ಎನ್ನುವವರನ್ನು ಬಂಧಿಸಲಾಗಿದೆ.

ರಾಜಮಂಡ್ರಿ, ವಿಶಾಖಪಟ್ಟಣ ಭಾಗದ ಮಹಿಳೆಯರು ದಂದೆಯಲ್ಲಿ ಪಾಲ್ಗೊಂಡಿದ್ದಾರೆ. ವಶಕ್ಕೆ ಪಡೆದ ಮಹಿಳೆಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆಸ್ಪತ್ರೆಯಲ್ಲಿ ಮಗು ಅದಲು ಬದಲು; ಕುಟುಂಬಸ್ಥರ ಆರೋಪ

ಪೊಲೀಸರು ಪೆಟ್ರೊಲಿಂಗ್ ಮಾಡುವಾಗ ಕಾರು ಅನುಮಾನಾಸ್ಪದ ರೀತಿಯಲ್ಲಿ ಓಡಾಟ ನಡೆಸುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ. ತಡೆದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಿಪಿಐ ಸಾಬಯ್ಯ ನಾಯಕ ನೇತೃತ್ವದಲ್ಲಿ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...