ರಾಯಚೂರು | ಅ.5ರಂದು ಬೆಂಗಳೂರಿನಲ್ಲಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ: ಮಾರೆಪ್ಪ ಹರವಿ

Date:

ವಸತಿ, ಭೂ ರಹಿತರಿಗೆ ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ‌‌ ಅ.5 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಗಾಂಧಿ‌ ಭವನದಲ್ಲಿ ‘ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ ಆಯೋಜಿಸಲಾಗಿದೆ ಎಂದು ಸಮಿತಿಯ ರಾಯಚೂರು ಜಿಲ್ಲಾ ಘಟಕದ ಸಂಚಾಲಕ ಮಾರೆಪ್ಪ ಹರವಿ ತಿಳಿಸಿದರು.

ರಾಯಚೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಗೌರವದಿಂದ ಬಾಳುವಷ್ಟು ಭೂಮಿ ಮತ್ತು ಘನತೆಯಿಂದ ಬದುಕುವಂಥ ವಸತಿ ಪ್ರತಿಯೊಬ್ಬರ ಹಕ್ಕು’ ಅಂತ್ಯೋದಯವಾದಾಗಲೇ ಸ್ವಾತಂತ್ರ್ಯದ ನಿಜವಾದ ಅರ್ಥ’ ಎಂಬುವುದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನಿಲುವಾಗಿತ್ತು. 2016ರಿಂದ 6 ಸುತ್ತಿನ ಹೋರಾಟ ಮಾಡಿದ್ದರು. ಇದರ ಫಲವಾಗಿ 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ ಸಚಿವರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿತ್ತು. ಆನಂತರ ಸರ್ಕಾರ ಬದಲಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಹಿನ್ನಡೆಯಾಯಿತು. ಈಗ ಪುನಃ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಅನೇಕ ಜಟಿಲ‌‌ ಸಮಸ್ಯೆಗಳಿಂದ ಸಮಿತಿ ಬಡವರ, ಭೂರಹಿತರ ಪರ ತೀರ್ಮಾನ ಕೈಗೊಳ್ಳಲು ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

IMG 20241002 WA0002

ಹೋರಾಟಗಾರ ಎಂ. ಆರ್. ಬೇರಿ ಮಾತನಾಡಿ, ರಾಜ್ಯದ ಲಕ್ಷಾಂತರ ಜನರಿಗೆ ವಸತಿ ಸೌಕರ್ಯ ಹಾಗೂ ತುಂಡು ಭೂಮಿಯೂ ಇಲ್ಲ. ಕೇಂದ್ರ ಸರ್ಕಾರದ ನೀತಿಗಳು, ಕಾಯ್ದೆಗಳಿಂದ ಫಲವತ್ತಾದ ಭೂಮಿ ಕಾರ್ಪೋರೆಟ್ ಸಂಸ್ಥೆಗಳ ಕೈ ಸೇರುತ್ತಿದೆ. ಅನೇಕ ವರ್ಷಗಳಿಂದ ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಫಾರಂ ನಂಬರ್ 50, 53, 57 ರ ಅಡಿಯಲ್ಲಿ ಅರ್ಜಿ ಸಲ್ಲಿಸಿದರೂ ಭೂಮಿ ಮಂಜೂರಾತಿ ನೀಡುತ್ತಿಲ್ಲ. ಬದಲಾಗಿ ಅರಣ್ಯ ಒತ್ತುವರಿಯ ಹೆಸರಿನಲ್ಲಿ ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಶಕಗಳಿಂದ ಉಳುಮೆ ಮಾಡುತ್ತಿರುವ ಬಡ ರೈತರಿಗೆ ಯುದ್ಧೋಪಾದಿಯಲ್ಲಿ ಭೂಮಿ ಮಂಜೂರು ಮಾಡಬೇಕು. ಬಡವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿ ಪುನರ್ ಚಾಲನೆಗೊಳಿಸಬೇಕು. ರೈತರಿಂದ‌ ಬಲವಂತದ ತೆರವು ಕೈಬಿಡಬೇಕು. ಬಲಾಢ್ಯರ ಒತ್ತುವರಿಗಳನ್ನು‌ ಸ್ವಾಧೀನಪಡಿಸಬೇಕು ಎಂದು ಮನವಿ ಮಾಡಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಯಚೂರು | ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶಾಸಕ ದದ್ದಲ್‌ಗೆ ಮನವಿ

ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗುಜರಾತಿನ ದಲಿತರ ಹೋರಾಟಗಾರ ಹಾಗೂ ಶಾಸಕ ಜಿಗ್ನೇಶ್ ಮೇವಾನಿ, ಪ್ರಗತಿಪರ ಚಿಂತಕಿ ಡಾ.ವಿಜಯಮ್ಮ ಭಾಗವಹಿಸಲಿದ್ದು, ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮುಖಂಡರಾದ ಖಾಜಾ ಅಸ್ಲಂ ಅಹ್ಮದ್, ಆಂಜನೇಯ ಕುರುಬದೊಡ್ಡಿ, ನರಸಿಂಹಲು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...