ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವನ್ನಪ್ಪಿದ ಪತಿ; ಅಂಚೆ ಮೂಲಕ ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ

Date:

ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದರೆ, ಇತ್ತ ಪತ್ನಿ ಗೃಹಸಚಿವ ಜಿ ಪರಮೇಶ್ವರ್‌ ಅವರಿಗೆ ಅಂಚೆ ಮೂಲಕ ಮಂಗಳಸೂತ್ರ ಕಳುಹಿಸಿರುವ ಮನಕಲಕುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶರಣ ಬಸವ ಜನವರಿ 17 ರಂದು ಆತ್ಮಹತ್ಯೆಗೆ ಶರಣಾಗಿದ್ದ. ಪತಿಯ ಸಾವಿನಿಂದ ನೊಂದ ಪತ್ನಿ ನಿನ್ನೆ ಗೃಹ ಸಚಿವರಿಗೆ ಮಂಗಳಸೂತ್ರ ಕಳುಹಿಸಿ, ಸಾಲ ಕೊಟ್ಟ ಫೈನಾನ್ಸ್ ಸಿಬ್ಬಂದಿ ತನ್ನ ಪತಿಗೆ ನಿತ್ಯ ಕಿರುಕುಳ ನೀಡಿದ್ದಾರೆ. ಹಾಗಾಗಿ ಪತಿಯ ಸಾವಿಗೆ ಕಾರಣವಾದ ಕಂಪನಿ ಹಾಗೂ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮೃತ ಶರಣಬಸವನ ಕುಟುಂಬ ನ್ಯಾಯಕ್ಕಾಗಿ ಹೋರಾಟಕ್ಕೆ ಸಜ್ಜಾಗಿದೆ. ಶರಣಬಸವ ಡ್ರೈವಿಂಗ್ ಜೊತೆ ಕೂಲಿ ಕೆಲಸವನ್ನೂ ಮಾಡುತ್ತಿದ್ದರು. ಆದರೆ ಕೆಲ ಖಾಸಗಿ ಕಂಪನಿಗಳಿಂದ ಸುಮಾರು ₹6-8 ಲಕ್ಷ ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಕೆಲ ಕಂತುಗಳು ಬಾಕಿ ಇದ್ದ ಹಿನ್ನೆಲೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿತ್ತಂತೆ. ಇದೇ ಕಾರಣಕ್ಕೆ ಶರಣಬಸವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಇದೀಗ ಮೃತನ ಕುಟುಂಬ ಜನಸೇವಾ ಫೌಂಡೇಶನ್ ಸಂಘಟನೆಯ ಜಾವೀದ್ ಖಾನ್ ಜತೆ ಒಗ್ಗೂಡಿ ಹೋರಾಟಕ್ಕಿಳಿದಿದ್ದಾರೆ. ಪತಿಯ ಸಾವಿನಿಂದ ಕಂಗಾಲಾಗಿರುವ ಪತ್ನಿ ನ್ಯಾಯ ಹಾಗೂ ಸಹಾಯಕ್ಕಾಗಿ ಎದುರು ನೋಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...