ರಾಯಚೂರು | ಕೇಂದ್ರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆ ಅನುದಾನ ಕಡಿತ; ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಅನುದಾನ ಕಡಿತ, ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಸರ್ಕಾರ ಘೋಷಣೆ ಮಾಡಿದ ಯೋಜನೆಗಳು ಕೇವಲ ಘೋಷಣೆಗಳಲ್ಲಿ ಮಾತ್ರ ಇದೆ. ಅನುದಾನವಿಲ್ಲದೆ ಸಮರ್ಪಕ ಅನುಷ್ಠಾನಗೊಳಿಸಲು ಹಿನ್ನಡೆಯಾಗುತ್ತಿದೆ ಎಂದು ದೂರಿದರು. ರಾಮ ರಾಜ್ಯ ಎನ್ನುವ ಸರ್ಕಾರ ಹಸಿವಿನ ಸೂಚ್ಯಾಂಕ ಸ್ಥಾನದಿಂದ ಭಾರತವನ್ನು ಮೇಲೆತ್ತಲು ಯೋಜನೆಗೆ ಅನುದಾನ ನೀಡದೇ ಯಾವ ಪ್ರಯತ್ನವನ್ನು ಬಜೆಟ್‌ನಲ್ಲಿ ಮಾಡಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಐಸಿಡಿಎಸ್‌ನಲ್ಲಿ 21,521.13 ಕೋಟಿಯಿಂದ 21,200 ಕೋಟಿಗೆ ಮಧ್ಯಂತರ ಬಜೆಟ್‌ನಲ್ಲಿ 300 ಕೋಟಿಗಿಂತ ಹೆಚ್ಚು ಬಜೆಟ್ ಕಡಿತ ಮಾಡಲಾಗಿದೆ. ಅನುದಾನ ಕಡಿತದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ವೇತನ ವಿಳಂಬ, ಬಾಡಿಗೆ ಪಾವತಿ, ಪೌಷ್ಠಿಕ ಆಹಾರಕ್ಕಾಗಿ ಹಣ ಬಿಡುಗಡೆ ನಿಗದಿತವಾಗಿ ಬಿಡುಗಡೆಯಾ ಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜೆಟ್ ಕಡಿತಗೊಳಿಸುವ ಪರಿಕಲ್ಪನೆಯಿರುವ ಸರ್ಕಾರ 2 ಕೋಟಿ ತಾಯಂದಿರು, 8 ಕೋಟಿ ಮಕ್ಕಳ ಆರೋಗ್ಯ, ಆಹಾರ, ಶಿಕ್ಷಣದ ಹಕ್ಕನ್ನು ಕಾಪಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.ಕಳೆದ 5 ವರ್ಷಗಳಲ್ಲಿ 1 ರೂ. ಅನುದಾನ, ವೇತನ ಹೆಚ್ಚಳ ಮಾಡದೆ ಸಬ್ ಕಾ ವಿಕಾಸ್ ಎಂದರೆ ವಿಕಾಸ್ ವಾಗುತ್ತಿದೆಯೇ, ಸರ್ಕಾರದ ಈ ಧೋರಣೆಯನ್ನು ಖಂಡಿಸಿದರು. ಐಸಿಡಿಎಸ್ ಯೋಜನೆಗೆ ಖಡಿತಗೊಳಿಸಿರುವ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ  ಅಧ್ಯಕ್ಷೆ ಎಚ್.ಪದ್ಮಾ, ತಾಲೂಕಾ ಕಾರ್ಯದರ್ಶಿ ನರ್ಮದಾ, ಕೆ.ಜಿ.ವೀರೇಶ, ಡಿ.ಎಸ್. ಶರಣ ಬಸವ, ಗೋಕುರಮ್ಮ, ಪಾರ್ವತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...