ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; 1,169 ಮಂದಿ ವಿದ್ಯಾರ್ಥಿಗಳ ಗೈರು

Date:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಚ್‌ 17ರ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -01ರ ಸಮಾಜಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕವಿಜ್ಞಾನ ವಿಷಯದ ಪರೀಕ್ಷೆಗಳಲ್ಲಿ ರಾಯಚೂರು ಜಿಲ್ಲೆಯ ಒಟ್ಟು 1,169 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.

ರಾಯಚೂರು ಜಿಲ್ಲೆಯ 49 ಕೇಂದ್ರಗಳಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಒಟ್ಟು 11,109 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 10,052 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದರೆ, 1,051 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ. ಜೀವಶಾಸ್ತ್ರ ವಿಷಯದಲ್ಲಿ ಒಟ್ಟು 4,828 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 4,737 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 91 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ಗಣಕವಿಜ್ಞಾನ ವಿಷಯದಲ್ಲಿ ಒಟ್ಟು 1,392 ಮಂದಿ ವಿದ್ಯಾರ್ಥಿಗಳು ನೋಂದಣೆಯಾಗಿದ್ದು, 1,357 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 27 ಮಂದಿ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...