ರಾಯಚೂರು | ಸರ್ಕಾರಿ ಭೂಮಿ ಕಬಳಿಸಿ, ಬಿಜೆಪಿ ಮುಖಂಡನಿಂದ ಅಕ್ರಮ ಮಾರಾಟ: ಮಹಾವೀರ್ ಆರೋಪ

Date:

ರಾಯಚೂರು ನಗರದ ಬೋಳಮಾನದೊಡ್ಡಿ ರಸ್ತೆಯ ಆಶೀರ್ವಾದ ಲೇಔಟ್ ಸೇರಿದಂತೆ ಹಲವು ಕಡೆ ಸರ್ಕಾರಿ ಭೂಮಿಯನ್ನು ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ವಿಶೇಷ ಭೂ ನ್ಯಾಯಾಲಯದ ಮಂಡಳಿಗೆ ದೂರು ನೀಡಲಾಗುವುದು ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್ ಮಹಾವೀರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶೀರ್ವಾದ ಲೇಔಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರು 18 ಜನ ನಿವೇಶನದಾರರಿಗೆ ವಾಪಸ್ ನೀಡಬೇಕು ಎಂದು ಆದೇಶ ಮಾಡಿದ್ದಾರೆ. ರವೀಂದ್ರ ಜಲ್ದಾರ್ ಅವರು ಸರ್ವೆ ನಂಬರ್ 889/2/ಎ, 932, 897/1,3,4 ಹಾಗೂ 990 ಮತ್ತು 901ನ ಸರ್ಕಾರಿ ಭೂಮಿಯನ್ನು ಗೂಂಡಾ ಪ್ರವೃತ್ತಿಯಿಂದ ನಿವೇಶನ ಕಬಳಿಸಿ ಮನಬಂದಂತೆ ಮಾರಾಟ ಮಾಡಿದ್ದಾರೆ. ಮೂಲ ನಿವೇಶನದಾರರಿಗೆ ನ್ಯಾಯಾಧೀಶರು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ರವೀಂದ್ರ ಜಲ್ದಾರ್ ಅವರು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಐಟಿ ಮತ್ತು ಇ.ಡಿಗೆ ದಾಖಲೆ ಸಮೇತ ದೂರು ನೀಡಿದರೂ ಇದುವರೆಗೆ ಸಮರ್ಪಕ ತನಿಖೆ ನಡೆಸಿಲ್ಲ. ರೇಡಿಯೋ ಸ್ಟೇಶನ್ ಬಳಿಯ ಸ್ಮಶಾನದ ಬಳಿ ಅಕ್ರಮವಾಗಿ ತರಕಾರಿ ಮಾರುಕಟ್ಟೆ ನಡೆಸಿ ನಗರಸಭೆಯ ಆದಾಯಕ್ಕೆ ಕೊಕ್ಕೆ ಇಡುತ್ತಿದ್ದಾರೆ. ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಸಚಿವ ಎನ್ ಎಸ್ ಬೊಸರಾಜು ಅವರ ಕೃಪಕಟಾಕ್ಷದಿಂದ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಳ್ಳಾರಿ | ಎರಡು ವರ್ಷದ ಮಗುವಿಗೆ ಲಿವರ್ ಸಮಸ್ಯೆ: ದಾನಿಗಳ ನೆರವಿಗಾಗಿ ಕಾಯುತ್ತಿರುವ ಪೋಷಕರು

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಪ್ರಭು ನಾಯಕ, ರಿಜ್ವಾನ್, ಬಸವರಾಜ, ಕೆ.ವಿ ಖಾಜಪ್ಪ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...