ರಾಯಚೂರು | ಆಕ್ರಮವಾಗಿ ಮರಳು ಗಣಿಗಾರಿಕೆ; ಬಸವರಾಜ ಕೊತ್ತದೊಡ್ಡಿ ತನಿಖೆಗೆ ಆಗ್ರಹ

Date:

ದೇವದುರ್ಗ ತಾಲೂಕಿನ ಕರ್ಕಿಹಳ್ಳಿ ಸರ್ವೆ 36/1ರ ಬಳಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ಇದರಿಂದ ಸರಿ ಸುಮಾರು ₹15 ಕೋಟಿ ಮೌಲ್ಯದ ಅಕ್ರಮ ನಡೆದಿದೆ. ಈ ಬಗ್ಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದರೂ ಕೂಡಾ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊತ್ತದೊಡ್ಡಿ ಆರೋಪಿಸಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ದೇವದುರ್ಗ ತಾಲೂಕಿನ ಮೂರು ಸ್ಥಳದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ಹಟ್ಟಿ ಚಿನ್ನದ ಗಣಿ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ. ಆದರೆ ಹಟ್ಟಿ ಚಿನ್ನದ ಗಣಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಮಗೆ ಸಂಬಂಧಿಸಿದಲ್ಲವೆಂದು ಹೇಳುವ ಮೂಲಕ ಅಕ್ರಮ ಗಣಿಗಾರಿಕೆಗೆ ಬೆಂಬಲವಾಗಿ ನಿಂತಿವೆ” ಎಂದು ದೂರಿದರು.

“ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಲತಾ ನೀಡಿರುವ ವರದಿಯಂತೆ, ʼಅಕ್ರಮವಾಗಿ ಸಂಗ್ರಹಿಸಿರುವ ದಾಸ್ತಾನು ಇಲಾಖೆಗೆ ಸೇರಿದ್ದಲ್ಲʼ ಎನ್ನುತ್ತಾರೆ. ಇನ್ನೂ ಹಟ್ಟಿ ಚಿನ್ನದ ಗಣಿ ಅಧಿಕಾರಿಗಳನ್ನು ಸಂಪರ್ಕಿಸಿದರೂ ನಮ್ಮದಲ್ಲ ಎನ್ನುತ್ತಾರೆ. ಸರಿ ಸುಮಾರು 15 ಕೋಟಿ ರೂ ಮೌಲ್ಯದ ಅಕ್ರಮವಾದ ಮರಳು ಯಾರದೆಂಬುದು ಗೊತ್ತಾಗುತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ರಮವಾಗಿ ಸಂಗ್ರಹಿಸಿರುವ ಮರಳಿನ ವಾರಸುದಾರರು ಯಾರೆಂದು ಅಧಿಕಾರಿಗಳಿಗೆ ಗೊತ್ತಿದ್ದರೂ, ಅವರ ರಕ್ಷಣೆಗೆ ಮುಂದಾಗುತ್ತಿದ್ದಾರೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಹಟ್ಟಿ ಚಿನ್ನದ ಗಣಿ ಅಧಿಕಾರಿ ವಿನೋದ್ ಕುಮಾರ ಎಂಬುವವರಿಗೆ ಸೇರಿದ ಸರ್ವೆ ಸಂಖ್ಯೆ 31/1ರ ಮೂರು ಎಕರೆ ಭೂಮಿಯಲ್ಲಿ ಮರಳು ಸಂಗ್ರಹಿಸಲಾಗಿದೆ.‌ ಈ ಕುರಿತು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ‌ ಸಹಾಯಕ ಆಯುಕ್ತರಿಗೂ ದೂರು ನೀಡಲಾಗಿದೆ. ಅಲ್ಲದೆ ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ, ಉಪಾಧ್ಯಕ್ಷ, ಎಸ್‌ಪಿಯವರಿಗೆ ದೂರು ನೀಡಿದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕೌಶಲ್ಯದ ಅವಶ್ಯವಿದೆ: ಡಾ. ಶಂಭು ಹೆಗಡ್ಯಾಳ

“ರಾಜಕೀಯ ಪ್ರಭಾವದಿಂದ ಇಂದಿಗೂ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದೆ. ಅಕ್ರಮವಾಗಿ ದಾಸ್ತಾನಿರುವ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅಕ್ರಮ ದಾಸ್ತಾನನ್ನು ಜಿಲ್ಲಾಡಳಿತ ವಶಪಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಲೋಕಾಯುಕ್ತರಿಗೆ ದೂರು ನೀಡುವುದರ ಜತೆಗೆ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶರಣಗೌಡ ಸುಂಕೇಶ್ವರಹಾಳ, ಆಂಜನೇಯ ನಾಯಕ, ಮಂಜುನಾಥ ಹೇರುಂಡಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...