ರಾಯಚೂರು | ಹಟ್ಟಿ ಚಿನ್ನದ ಗಣಿಯ ಅಧಿಕಾರಿಗಳಿಂದ ಅಕ್ರಮ ಮರಳು ದಂಧೆ; ಲೋಕಾಯುಕ್ತರಿಗೆ ದೂರು

Date:

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅವ್ಯಾಹುತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಹಟ್ಟಿ ಚಿನ್ನದ ಗಣಿಯ ನಾಲ್ಕು ಅಧಿಕಾರಿಗಳು ಹಾಗೂ ಇಬ್ಬರು ಗುತ್ತಿಗೆದಾರರ ವಿರುದ್ದ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಯಾವುದೇ ಕ್ರಮವಾಗದೇ ಹೋದಲ್ಲಿ ಮತ್ತೊಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವದಾಗಿ ಸಮಾಜಿಕ ಕಾರ್ಯಕರ್ತರ ಹನಮಂತಪ್ಪ ಭಂಗಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕೃಷ್ಣ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆಯ ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ ಹಾಗೂ ಯಾದಗಿರಿ ಜಿಲ್ಲೆ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರು ಇವರು ಬೆಂಬಲಿಗರು ಕಾರಣವಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಮತ್ತು ಕರ್ಕಿಹಳ್ಳಿ ,ಯಾದಗಿರಿ ಜಿಲ್ಲೆಯ ಚೌಡೇಶರಾಳ ಮತ್ತು ಹೀರೆರಾಯಕುಂಪಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಈ ಕುರಿತು ಹಟ್ಟಿ ಚಿನ್ನದ ಗಣಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ . ನಿತ್ಯವೂ ಸರ್ಕಾರಕ್ಕೆ ವಂಚನೆಯಾದರೂ ಅಧಿಕಾರಿಗಳು ರಕ್ಷಣೆ ಮಾಡುತ್ತಿದ್ದಾರೆ. ರಾಜಕೀಯ ಪ್ರಭಾವದಿಂದ ಅಕ್ರಮ ದಂಧೆ ನಡೆಯುತ್ತಿದೆ. ಉಸ್ತುವಾರಿ ಸಚಿವರು, ಶಾಸಕರುಗಳೇ ರಕ್ಷಣೆಗೆ ನಿಂತಿರುವದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತಿಲ್ಲ.

ಹಟ್ಟಿ ಚಿನ್ನದ ಗಣಿ ಅಧಿಕಾರಿಗಳು ಸ್ಟಾಕ ಯಾರ್ಡಗೆ ಸರಹದ್ದು ನಿಗಧಿಪಡಿಸಿಲ್ಲ. ವೇ ಬ್ರೀಡ್ಸ್ ದತ್ತಾಂಶಗಳನ್ನೇ ಅಳಿಸಿ ಹಾಕಲಾಗಿದೆ. ನಿಗಧಿಗಿಂತ ಹೆಚ್ಚು ಮರಳು ಸಾಗಾಣೆ, ರಾಜಸ್ವ ವಂಚನೆ ನಡೆಯುತ್ತಿದೆ. ಮರಳು ಸಾಗಾಣೆ ಮಾಡುವ ವಾಹನಗಳಿಗೆ ಗುತ್ತಿಗೆದಾರರೇ ಪರವಾನಿಗೆ ಪ್ರಮಾಣ ಪತ್ರ ನೀಡುತ್ತಿದ್ದಾರೆ. ಮರಳು ದಾಸ್ತಾನುಗಳಲ್ಲಿ ಸಿಸಿಟಿವಿ ಫೂಟೇಜ್ ಇರುವದಿಲ್ಲ. ಅಕ್ರಮಕ್ಕೆ ಬೇಕಾದ ಎಲ್ಲ ಕ್ರಮಗಳಿಗೆ ಹಟ್ಟಿಚಿನ್ನದ ಗಣಿ ಅಧಿಕಾರಿಗಳೇ ಕಾರಣವಾಗಿದ್ದಾರೆ. ಸರ್ಕಾರಕ್ಕೆ ಆದಾಯ ಖೋತಾ ಮಾಡಿ ಅಧಿಕಾರಿಗಳು ಗುತ್ತಿಗೆದಾರರು ಹಗಲು ದರೋಡೆ ನಡೆಸುತ್ತಿದ್ದಾರೆ. ಕೂಡಲೇ ಅಕ್ರಮ ತಡೆಯಬೇಕು. ಇಲ್ಲದೇ ಹೋದಲ್ಲಿ ಮತ್ತೊಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಎರಡನೇ ಬೆಳೆಗೆ ನೀರು ಕೊಡುವಂತೆ ಪಕ್ಷಾತೀತವಾಗಿ ಜಿಲ್ಲಾ ಉಸ್ತುವಾರಿಗೆ ಮನವಿ

ಈ ಸಂದರ್ಬದಲ್ಲಿ ಶಿವರಾಜ ,ಮಲ್ಲಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...