ರಾಯಚೂರು | ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಯಚೂರು ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಆನಂತರ ಈ ಕುರಿತು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಸಂಯೋಜನೆ, ಇ-ಆಫೀಸ್ ಸೇರಿದಂತೆ ಒಟ್ಟು 21 ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿವನ್ನು ನೀಡಬೇಕು ಎಂದು ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿಯ ವ್ಯವಸ್ಥೆ ಮಾಡಬೇಕು. ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ ಹಾಗೂ ಅಲ್ಮರಾ ನೀಡಬೇಕು. ಉತ್ತಮ ಗುಣಮಟ್ಟದ ಮೊಬೈಲ್ ಪೋನ್, ಸಿಯಿಜಿ ಸಿಮ್ ಮತ್ತು ಡಾಟಾ, ಗೀಗಲ್ ಕ್ರೋಮ ಬುಕ್, ಲ್ಯಾಪ್‌ಟಾಪ್ , ಪ್ರಿಂಟರ್ ಹಾಗೂ ಸ್ಕ್ಯಾನರ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಬೈಲ್ ತಂತ್ರಾಂಶಗಳ ಕರ್ತವ್ಯದ ವಿಚಾರವಾಗಿ ಇಲ್ಲಿಯವರೆಗೆ ಅಮಾನತುಗಳನ್ನು ರದ್ದುಪಡಿಸಬೇಕು. ಕೆಸಿಎಸ್‌ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೊ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಆದೇಶ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ಪ್ರಥಮ ದರ್ಜೆ ಸಹಾಯಕ ಹಾಗೂ ಕಂದಾಯ ನಿರೀಕ್ಷಕರಿಗೆ ಖಾಲಿ ಇರುವ ಹುದ್ದೆಗಳಿಗೆ ಬಡ್ತಿ ನೀಡಬೇಕು, ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಬೇಕು ಹಾಗೂ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು. ಶಿಷ್ಟಾಚಾರ ಕರ್ತವ್ಯದಿಂದ ಗ್ರಾಮದಿಂದ ಅಧಿಕಾರಿಗಳಿಗೆ ಕೈಬಿಡಬೇಕು. ಕೆಲಸ ಅವಧಿಯ ಮುನ್ನ ಹಾಗೂ ನಂತರ ನಡೆಸಲಾಗುವ ಎಲ್ಲ ಬಗೆಯ ವರ್ಚ್ಯೂಲ್ ಸಭೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.3ರಂದು ರಾಯಚೂರು ಬಂದ್: ಅಂಬಣ್ಣ ಅರೋಲಿಕರ್

ಪ್ರತಿಭಟನೆಯಲ್ಲಿ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಂದ್ರ ಪಾಟೀಲ, ಪದಾಧಿಕಾರಿಗಳಾದ ಮಂಜುನಾಥ, ರಾಜಶೇಖರ, ಮನ್ಸೂರ್ ಅಲ್ ಹಸನ್, ಸಚಿನಕುಮಾರ, ಗಂಗಪ್ಪ, ಮಹಾಂತೇಶ ರಾಥೋಡ್, ಕಬೀರ ಹುಸೇನ್, ಶಿವಕುಮಾರ ರಾಥೋಡ್, ಯಂಕಮ್ಮ, ದೀಪಾ, ತಸ್ಲೀಮ್, ಶ್ವೇತಾನಾಯಕ, ಆಫ್ರೀನ್ ಬೇಗಂ, ಸುನೀತಾ, ಶಾಂತಮ್ಮ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...