ರಾಯಚೂರು | ಅಮೆರಿಕ ಉಪಾಧ್ಯಕ್ಷರ ಭಾರತ ಭೇಟಿ; ಕೆಪಿಆರ್‌ಎಸ್‌ ಖಂಡನೆ

Date:

ಭಾರತ ದೇಶಕ್ಕೆ ಅಮೆರಿಕ ದೇಶದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭೇಟಿ ನೀಡಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ಖಂಡಸಿದೆ. ರಾಯಚೂರು ಜಾಲಹಳ್ಳಿ ಘಟಕ ವತಿಯಿಂದ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಮೂಲಕ ಭಾರತ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿ, ವ್ಯಾನ್ಸ್‌ ಅವರ ಭೇಟಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದೆ.

ಕೆಪಿಆರ್‌ಎಸ್ ‌ರಾಯಚೂರು ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಮಾತನಾಡಿ, “ಭಾರತವು ಮಾರಾಟಕ್ಕಿಲ್ಲ ಎಂಬ ಬಲವಾದ ಸಂದೇಶ ರವಾನಿಸಲು, ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಯನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ” ಎಂದು ಆರೋಪಿಸಿದರು.

ಈ ಬೆನ್ನಲ್ಲೇ ಅಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ, ಆದ್ದರಿಂದ ಈ ಭೇಟಿ ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಟ್ರಂಪ್ -ವಾನ್ಸ್ ಪ್ರತಿಕೃತಿ ದಹಿಸಿ ತೀವ್ರ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆಯಲ್ಲಿ ಬಿದ್ದು 10 ವರ್ಷದ ಬಾಲಕ ಸಾವು

ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ. ವಿಶೇಷವಾಗಿ ರಾಜ್ಯದ ಹೈನುಗಾರಿಕೆಗೆ ಮತ್ತು ಕರ್ನಾಟಕ ಹಾಲು ಒಕ್ಕೂಟ (KMF) ಕ್ಕೆ ಈ ಅಮದು ಸುಂಕ ನಿರ್ಧಾರ ಶವಪಟ್ಟಿಗೆಗೆ ಹೊಡೆಯುವ ಕೊನೆ ಮೊಳೆ ಆಗಲಿದೆ ಹಾಗಾಗಿ ಯಾವುದೇ ಒತ್ತಡಕ್ಕೂ ಮಣಿಯದೇ ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ ಸೇರಿದಂತೆ ಒಟ್ಟಾರೆ ಕೃಷಿಯನ್ನು ವಾಣಿಜ್ಯ ಮಾತುಕತೆಗಳಿಂದ ಹೊರಗಿಡಬೇಕು ಎಂದು ನರೇಂದ್ರ ಮೋದಿ ಸರ್ಕಾರವನ್ನು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಗೋವಿಂದರಾಜ, ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕ ಅಧ್ಯಕ್ಷ ದುರ್ಗಪ್ಪ ವರಟಿ, ಕಾರ್ಯದರ್ಶಿ ರಂಗನಾಥ ಬುಂಕಲದೊಡ್ಡಿ, ಶಬ್ಬೀರ್ ಜಾಲಹಳ್ಳಿ , ಗ್ರಾಮ ಪಂಚಾಯಿತಿ ಸದಸ್ಯರಾದ ಮಕ್ತುಂಪಾಷಾ, ಬಸವರಾಜ ವಂದಲಿ, ಹನುಮಂತ, ರಿಯಾಜ್ ಖುರೇಷಿ, ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...